ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಎಂಸಿ ಗೂಂಡಾಗಳ ಹಿಂಸಾಚಾರ; ಏನ್ಮಾಡ್ತಾರೆ ಸಿಎಂ ಮಮತಾ –ಸಿ.ಟಿ.ರವಿ ಪ್ರಶ್ನೆ

Last Updated 30 ಮಾರ್ಚ್ 2022, 11:40 IST
ಅಕ್ಷರ ಗಾತ್ರ

ನವದೆಹಲಿ: ಬಿರ್‌ಭೂಮ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಬಿರ್‌ಭೂಮ್‌ನಲ್ಲಿ ಟಿಎಂಸಿ ಗೂಂಡಾಗಳಿಂದ ಅಮಾಯಕರ ಸಜೀವ ದಹನ ಮಾಡಲಾಯಿತು. ಬಿಜೆಪಿ ಶಾಸಕರ ಮೇಲೆ ಅಶಿಸ್ತಿನ ಟಿಎಂಸಿ ಶಾಸಕರು ಹಲ್ಲೆ ಮಾಡಿ ಹಿಂಸಾಚಾರ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ ಎಂದು ಟಿಎಂಸಿ ಶಾಸಕರು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಕುರಿತು ಅಲ್ಲಿನ ಸಿಎಂ ಮಮತಾ ಬ್ಯಾನರ್ಜಿ ಅವರು ಏನು ಮಾಡುತ್ತಾರೋ ಕಾದುನೋಡಬೇಕು’ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯನ್ನು ದೂಷಿಸಿ ಎನ್‌ಡಿಎಯೇತರ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಿರಿ! ಎಂದು ಹೇಳುವ ಮೂಲಕ ಸಿ.ಟಿ.ರವಿ, ಮಮತಾ ಬ್ಯಾನರ್ಜಿ ಅವರ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.

ಮಾರ್ಚ್‌ 22ರಂದು ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ನ ಟಿಎಂಸಿ ಪಂಚಾಯಿತಿ ಸದಸ್ಯನ ಹತ್ಯೆ ನಡೆದಿತ್ತು. ಅದರ ಬೆನ್ನಲ್ಲೇ ಪಕ್ಕದ ಬೋಗ್‌ತುಇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕೃತ್ಯದಲ್ಲಿ 9 ಜನರು ಜೀವಂತವಾಗಿ ಸುಟ್ಟುಹಾಕಲಾಗಿತ್ತು. ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಕಲ್ಕತ್ತ ಹೈಕೋರ್ಟ್‌ನ ಆದೇಶದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ.

ಓದಿ...ಬಿರ್‌ಭೂಮ್‌ ಹಿಂಸಾಚಾರ: ಬಿಜೆಪಿ ವರದಿಯಿಂದ ಸಿಬಿಐ ತನಿಖೆಗೆ ಅಡ್ಡಿ –ಮಮತಾ ಆರೋಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT