ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅರ್ಜುನ್ ಸಿಂಗ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರುವ ಸಾಧ್ಯತೆ ಇದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ‘ಪಕ್ಷದಲ್ಲಿ ಉನ್ನತ ಹುದ್ದೆಯಲ್ಲಿದ್ದರೂ, ಸರಿಯಾಗಿ ಕೆಲಸ ಮಾಡಲು ಅವಕಾಶ ಸಿಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ಇತ್ತೀಚೆಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ರಾಜ್ಯ ಘಟಕದ ಪರಿಸ್ಥಿತಿಯ ಬಗ್ಗೆ ತಿಳಿಸಿದ್ದೇನೆ’ ಎಂದೂ ಅರ್ಜುನ್ ಸಿಂಗ್ ಹೇಳಿದ್ದಾರೆ.

ಬಿಜೆಪಿಯಲ್ಲಿ ಉತ್ತಮ ಕಾರ್ಯಕರ್ತರಿಗೆ ಅರ್ಹ ಮನ್ನಣೆ ದೊರೆಯುತ್ತಿಲ್ಲ. ರಾಜ್ಯ ಘಟಕದ ಉಪಾಧ್ಯಕ್ಷನಾಗಿದ್ದರೂ ಸರಿಯಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಮಹತ್ವ ಪಡೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.