ಕೋಲ್ಕತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಕೋಲ್ಕತ್ತ (ಪ.ಬಂಗಾಳ): ಉತ್ತರ ಕೋಲ್ಕತ್ತದ ಬಿಜೆಪಿ ಜಿಲ್ಲಾಧ್ಯಕ್ಷ ಶಿಬಾಜಿ ಸಿಂಘಾ ರಾಯ್ ಮೇಲೆ ಬುಧವಾರ ಹಲ್ಲೆ ನಡೆದಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಗಾಯಗೊಂಡಿರುವ ಶಿಬಾಜಿ ಸಿಂಘಾ ರಾಯ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಸುವೆಂದು ಅಧಿಕಾರಿ ಹಾಗೂ ಶಂಕುದೇಬ್ ಪಾಂಡಾ ವಿರುದ್ಧವೂ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಏತನ್ಮಧ್ಯೆ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಇಲ್ಲದಾಗಿದೆ ಎಂದು ಲೋಕಸಭಾ ಸಂಸದ ಡಾ. ಸುಕಂತ ಮಜುಂದಾರ್ ಆರೋಪಿಸಿದರು.
#WATCH I West Bengal: BJP District President North Kolkata Shibaji Singha Roy was injured after he along with party leaders including Suvendu Adhikari and Shankudeb Panda was attacked allegedly by some persons at Phool Bagan.
He has been admitted to a hospital. pic.twitter.com/ZUs2jDIEKJ
— ANI (@ANI) February 17, 2021
ಫೂಲ್ಭಾಗನ್ ಬಳಿ ಟಿಎಂಸಿ ಗೂಂಡಾಗಳು ಬಿಜೆಪಿ ನಾಯಕರ ಮೇಲೆ ಮತ್ತೊಂದು ದಾಳಿ ನಡೆಸಿದ್ದಾರೆ. ಈ ಬಾರಿ ಸುವೆಂದು ಅಧಿಕಾರಿ, ಶಂಕುದೇಬ್ ಹಾಗೂ ಶಿಬಾಜಿ ಸಿಂಘಾ ರಾಯ್ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದೆಗೆಟ್ಟಿದೆ ಎಂದು ಮಂಜುದಾರ್ ಆರೋಪ ಮಾಡಿದರು.
ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಚಿವರ ಮೇಲೆ ಬಾಂಬ್ ದಾಳಿ; ಗಾಯ
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ವ್ಯಾಪಕವಾಗಿ ರಾಜಕೀಯ ಅಹಿತಕರ ಘಟನೆಗಳು ನಡೆಯುತ್ತಿದೆ. ಈ ಮುನ್ನ ಪಶ್ಚಿಮ ಬಂಗಾಳದ ಕಾರ್ಮಿಕ ಸಚಿವ ಜಾಕೀರ್ ಹೊಸೈನ್ ಮೇಲೆ ಕಚ್ಚಾ ಬಾಂಬ್ ದಾಳಿ ನಡೆದಿತ್ತು. ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.