ಕೋಲ್ಕತ್ತ: ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ (ಸೆಪ್ಟೆಂಬರ್8) ಪ್ರಚಾರ ಆರಂಭಿಸಲಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ದಕ್ಷಿಣ ಕೋಲ್ಕತ್ತದ ಈ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಭಾನುವಾರ ಅಧಿಕೃತವಾಗಿ ಪ್ರಕಟಿಸಿತ್ತು.ಸಾಂವಿಧಾನಿಕ ಬಿಕ್ಕಟ್ಟು ಶಮನಕ್ಕಾಗಿ ರಾಜ್ಯ ಸರ್ಕಾರದ ಮನವಿ ಮೇರೆಗೆ ಚುನಾವಣಾ ಆಯೋಗವುಶನಿವಾರ ಉಪಚುನಾವಣೆ ಘೋಷಿಸಿತ್ತು.
ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಎದುರು ಸೋಲು ಕಂಡಿದ್ದರು. ಹೀಗಾಗಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲುಇಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ.
ಈ ಹಿಂದೆ ಮಮತಾರ ಆಪ್ತರಾಗಿದ್ದ ಅಧಿಕಾರಿ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು.
ಭವಾನಿಪುರ ಮಾತ್ರವಲ್ಲದೆ ಮುರ್ಷಿದಾಬಾದ್ ಜಿಲ್ಲೆಯ ಸಂಸರ್‌ಗಂಜ್ ಮತ್ತು ಜಂಗೀಪುರ್‌ಕ್ಷೇತ್ರಗಳ ಉಪಚುನಾವಣೆಯು ಸೆಪ್ಟೆಂಬರ್30ಕ್ಕೆ ನಿಗದಿಯಾಗಿದೆ. ಬಂಗಾಳ ವಿಧಾನಸಭೆಗೆ ನಡೆದ ಎಂಟು ಹಂತಗಳ ಚುನಾವಣೆ ವೇಳೆ ಸಂಸರ್‌ಗಂಜ್ ಮತ್ತು ಜಂಗೀಪುರ್ ಕ್ಷೇತ್ರಗಳಲ್ಲಿಮತದಾನ ನಡೆದಿರಲಿಲ್ಲ.
ಅಕ್ಟೋಬರ್3ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಮಮತಾ ಅವರು 2011, 2016ರಲ್ಲಿ ನಡೆದ ಚುನಾವಣೆ ವೇಳೆ ಭವಾನಿಪುರ ಕ್ಷೇತ್ರದಿಂದಲೇ ಸ್ಪರ್ಧಿಸಿ ಗೆಲುವು ಕಂಡಿದ್ದರು.
ಈ ಸಲ ಇಲ್ಲಿ ಗೆದ್ದುಬಂಗಾಳದ ಕೃಷಿ ಸಚಿವರಾಗಿದ್ದ ಹಿರಿಯ ನಾಯಕ ಶೋಭನ್‌ದೇವ್ ಚಟ್ಟೋಪಾಧ್ಯಾಯ ಅವರು ಮೇ ತಿಂಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಉಪಚುನಾವಣೆ ನಿಗದಿಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.