ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯ ಕಾರ್ಯದರ್ಶಿಯನ್ನು ಕೇಂದ್ರಕ್ಕೆ ಕಳುಹಿಸಲ್ಲ: ಪ್ರಧಾನಿ ಮೋದಿಗೆ ಮಮತಾ ಪತ್ರ

Last Updated 31 ಮೇ 2021, 5:41 IST
ಅಕ್ಷರ ಗಾತ್ರ

ಕೋಲ್ಕತ್ತ: ರಾಜ್ಯದ ಮುಖ್ಯ ಕಾರ್ಯದರ್ಶಿ ಅಲಪನ್‌ ಬಂಡೋಪಾಧ್ಯಾಯ ಅವರನ್ನು ಕೇಂದ್ರದ ಸೇವೆಗೆ ಕಳುಹಿಸಿಕೊಡಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಕೋವಿಡ್‌–19 ನಿರ್ವಹಣೆಗೆ ಸಂಬಂಧಿಸಿ ರಾಜ್ಯಕ್ಕೆ ಅಲಪನ್‌ ಬಂಡೋಪಾಧ್ಯಾಯ ಅವರ ಸೇವೆಯ ಅಗತ್ಯವಿದೆ. ಹೀಗಾಗಿ ಅವರನ್ನು ಕೇಂದ್ರದ ಸೇವೆಗೆ ಕಳುಹಿಸಿಕೊಡಲಾಗದು ಎಂದು ಪತ್ರದಲ್ಲಿ ಮಮತಾ ಉಲ್ಲೇಖಿಸಿದ್ದಾರೆ.

ಕಳೆದ ಶುಕ್ರವಾರ ಮಮತಾ ಬ್ಯಾನರ್ಜಿ ಜೊತೆ ಅಲಪನ್‌ ಬಂಡೋಪಾಧ್ಯಾಯ ಅವರು ಮೋದಿ ಅವರನ್ನು ಭೇಟಿ ಮಾಡಿ ಯಸ್‌ ಚಂಡಮಾರುತದಿಂದ ಉಂಟಾದ ಹಾನಿ ಕುರಿತಾಗಿ ವರದಿ ಸಲ್ಲಿಸಿದ್ದರು. ಬಳಿಕ ಕೇಂದ್ರ ಸರ್ಕಾರ ಕರೆದಿದ್ದ ಪುನರ್‌ ಪರಿಶೀಲಿನೆ ಸಭೆಗೆ ಅವರು ಗೈರಾಗಿದ್ದರು. ಇದರ ಬೆನ್ನಲ್ಲೇ ಬಂಡೋಪಾಧ್ಯಾಯ ಅವರನ್ನು ವಾಪಸ್ ಕರೆಸಿಕೊಳ್ಳುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಮೇ 31ರಂದು ವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಿತ್ತು.

ಇದಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ಕೇಂದ್ರ ಈ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ರಾಜ್ಯದಲ್ಲಿ ಕೋವಿಡ್‌ ನಿರ್ವಹಣೆಗೆ ಬಂಡೋಪಾಧ್ಯಾಯ ಅಗತ್ಯವಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದ್ವೇಷದ ರಾಜಕಾರಣದಲ್ಲಿ ತೊಡಗಿದೆ ಎಂದು ಮಮತಾ ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT