ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ಮುಖ್ಯಕಾರ್ಯದರ್ಶಿ ವರ್ಗಾವಣೆ

Last Updated 28 ಮೇ 2021, 20:57 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಜಟಾಪಟಿ ನಡೆದಿರುವ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ ಅವರನ್ನು ದೆಹಲಿಗೆ ವರ್ಗಾವಣೆ ಮಾಡಲಾಗಿದೆ.

ಮೇ 31ರಂದು ಬೆಳಿಗ್ಗೆ 10ಕ್ಕೆ ದೆಹಲಿಯಲ್ಲಿರುವ ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಅವರಿಗೆ ಇಲಾಖೆ ಶುಕ್ರವಾರ ಸೂಚಿಸಿದೆ.

ಈ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಟಿಎಂಸಿ, ‘ಮೋದಿ–ಶಾ ನೇತೃತ್ವದಲ್ಲಿ ಬಿಜೆಪಿ ಎಂಥ ಕೆಳಮಟ್ಟಕ್ಕೂ ಹೋಗಬಲ್ಲದು ಎಂಬುದನ್ನು ಈ ನಡೆಯಿಂದ ಗೊತ್ತಾಗುತ್ತದೆ’ ಎಂದು ವಾಗ್ದಾಳಿ ನಡೆಸಿದೆ.

ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿದ ನಂತರವಷ್ಟೇ ಆಲಾಪನ್‌ ಅವರು ಹೊಸ ಹುದ್ದೆಯ ಅಧಿಕಾರ ಸ್ವೀಕರಿಸಲು ಸಾಧ್ಯ. ಹೀಗಾಗಿ ಈ ಬೆಳವಣಿಗೆ ಮತ್ತೊಂದು ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT