ಸೋಮವಾರ, ಸೆಪ್ಟೆಂಬರ್ 26, 2022
24 °C

Video| ಜನಪದ ಕಲಾವಿದರೊಂದಿಗೆ ನೃತ್ಯದಲ್ಲಿ ಭಾಗವಹಿಸಿದ ಮಮತಾ ಬ್ಯಾನರ್ಜಿ  

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಕೋಲ್ಕತ್ತದ ರೆಡ್ ರೋಡ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಕಲಾವಿದರೊಂದಿಗೆ ಹೆಜ್ಜೆ ಹಾಕಿದರು.  

ಭಾಷಣ ಮುಗಿಯುತ್ತಲೇ ಜನಪದ ಕಲಾವಿದರ ಬಳಿಗೆ ತೆರಳಿದ ಮಮತಾ ಬ್ಯಾನರ್ಜಿ ಅವರೊಂದಿಗೆ ಲಘುಬಗೆಯಲ್ಲೇ ಹೆಜ್ಜೆ ಹಾಕಿದರು. 

ಇದಕ್ಕೂ ಮೊದಲು ಸ್ವಾತಂತ್ರ್ಯೋತ್ಸವದ ತಮ್ಮ ಭಾಷಣದಲ್ಲಿ ಮಮತಾ ಅವರು, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಿಗೆ ನಮನ ಸಲ್ಲಿಸಿದರು. 

ಭಾರತೀಯರು ದೇಶದ ಪ್ರಜಾಪ್ರಭುತ್ವ ಮೌಲ್ಯಗಳ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯವನ್ನು ಪಡೆದ ಪೂರ್ವಜರ ಪವಿತ್ರ ಪರಂಪರೆಯನ್ನು ಭಾರತೀಯರು ಸಂರಕ್ಷಿಸಬೇಕು ಎಂದು ಬ್ಯಾನರ್ಜಿ ಹೇಳಿದರು.

ಇವುಗಳನ್ನೂ ಓದಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು