ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಮಮತಾ ಬ್ಯಾನರ್ಜಿ

Last Updated 27 ಜುಲೈ 2022, 10:45 IST
ಅಕ್ಷರ ಗಾತ್ರ

ಕೋಲ್ಕತ್ತ: ಬಿಜೆಪಿಯು 2024ರಲ್ಲಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಾರದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ 40ಕ್ಕೆ ಏರಿಕೆಯಾಗಿದೆ. ಆದರೆ ಬಂಗಾಳದಲ್ಲಿ ಶೇ 45ಕ್ಕೆ ಇಳಿಕೆಯಾಗಿದೆ. ಮಾಧ್ಯಮ ವಿಚಾರಣೆಗಳು ಮುಂದುವರಿಯುತ್ತಿವೆ. ಅವುಗಳು ಜನರನ್ನೇ ಆರೋಪಿಗಳನ್ನಾಗಿಸುತ್ತಿವೆ, ಬಂಗಾಳದ ಬಗ್ಗೆ ತಪ್ಪುಕಲ್ಪನೆ ಹರಡಲು ಬಯಸುತ್ತಿವೆ ಎಂದು ಹೇಳಿದ್ದಾರೆ.

ಅವರಿಗೆ (ಬಿಜೆಪಿ) ಕೆಲಸವಿಲ್ಲ. 3–4 ಏಜೆನ್ಸಿಗಳನ್ನು ಬಳಸಿಕೊಂಡು ರಾಜ್ಯ ಸರ್ಕಾರಗಳನ್ನು ತಮ್ಮ ತೆಕ್ಕೆಗೆ ತೆಗದುಕೊಳ್ಳುವುದೇ ಅವರ ಕೆಲಸ. ಅವರು ಮಹಾರಾಷ್ಟ್ರ ಸರ್ಕಾರವನ್ನು ಸ್ವಾಧೀನಕ್ಕೆ ತೆಗೆದುಕೊಂಡರು, ಈಗ ಜಾರ್ಖಂಡ್‌ನಲ್ಲಿ ಅದೇ ಕೆಲಸ ಮಾಡುತ್ತಿದ್ದಾರೆ. ಆದರೆ, ಬಂಗಾಳದಲ್ಲಿ ಅವರನ್ನು ಸೋಲಿಸಲಾಗಿದೆ. ಬಂಗಾಳವನ್ನು ಒಡೆಯುವುದು ಅವರಿಗೆ ಸುಲಭವಿಲ್ಲ ಎಂದು ಮಮತಾ ಹೇಳಿರುವುದಾಗಿ ‘ಎಎನ್‌ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT