ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭವಾನಿಪುರದಲ್ಲಿ ಮಮತಾ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾದ ಕಾಂಗ್ರೆಸ್

Last Updated 6 ಸೆಪ್ಟೆಂಬರ್ 2021, 16:34 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಉಪಚುನಾವಣೆಯಲ್ಲಿ ಭವಾನಿಪುರ ಕ್ಷೇತ್ರದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಈ ಕುರಿತು ಪಕ್ಷವು ಚಿಂತನೆ ನಡೆಸುತ್ತಿದೆ ಎಂದು ಕಾಂಗ್ರೆಸ್‌ನ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ಅಧಿರ್ ರಂಜನ್ ಚೌಧರಿ ಹೇಳಿದ್ದಾರೆ.

ಪಕ್ಷದ ಕೋಲ್ಕತ್ತದ ಕಚೇರಿಯಲ್ಲಿ ಮಾತನಾಡಿದ ಅವರು, ಭವಾನಿಪುರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಎಡಪಕ್ಷ–ಕಾಂಗ್ರೆಸ್ ಮೈತ್ರಿಯು ಬಯಸುತ್ತಿದೆ. ಈ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ನಮ್ಮ ಪ್ರಸ್ತಾವವನ್ನು ಕಳುಹಿಸಿಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಟಿಎಂಸಿ ಈಗಾಗಲೇ ಬಿಡುಗಡೆ ಮಾಡಿದೆ.

ಭವಾನಿಪುರದಿಂದ ಮಮತಾ ಬ್ಯಾನರ್ಜಿ, ಮುರ್ಷಿದಾಬಾದ್‌ನ ಜಂಗೀಪುರ ಕ್ಷೇತ್ರದಿಂದ ಮಾಜಿ ಸಚಿವ ಜಾಕಿರ್ ಹುಸೇನ್, ಸಮ್‌ಸೇರ್‌ಗಂಜ್ ಕ್ಷೇತ್ರದಿಂದ ಅಮಿರುಲ್ ಇಸ್ಲಾಂ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಭಾನುವಾರ ಟ್ವೀಟ್ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT