ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಎಂಸಿ ಶಾಸಕನಿಂದ ಮತಗಟ್ಟೆ ವಶಕ್ಕೆ ಯತ್ನ: ಭವಾನಿಪುರ ಬಿಜೆಪಿ ಅಭ್ಯರ್ಥಿಯ ಆರೋಪ

Last Updated 30 ಸೆಪ್ಟೆಂಬರ್ 2021, 3:12 IST
ಅಕ್ಷರ ಗಾತ್ರ

ಕೋಲ್ಕತ್ತ: ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭೆಗೆ ಇಂದು(ಗುರುವಾರ) ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಈ ಉಪ ಚುನಾವಣೆಯು ತೀವ್ರ ಮಹತ್ವ ಪಡೆದುಕೊಂಡಿದೆ.

ಇದೇ ವೇಳೆ ಟಿಎಂಸಿ ಶಾಸಕ ಮದನ್‌ ಮಿತ್ರ ಅವರು ಮತಗಟ್ಟೆಯೊಂದನ್ನು ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್‌ ಆರೋಪಿಸಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐನೊಂದಿಗೆ ಮಾತನಾಡಿರುವ ಅವರು, 'ಟಿಎಂಸಿ ಶಾಸಕ ಮದನ್‌ ಮಿತ್ರ ಅವರು ಮತಗಟ್ಟೆಯನ್ನು (ವಾರ್ಡ್‌ 72) ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ಮತಯಂತ್ರವನ್ನು ಸ್ಥಗಿತಗೊಳಿಸಲಾಗಿದೆ' ಎಂದು ಟಿಬ್ರೆವಾಲ್ ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು. ಸೆ.30ರಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಅಕ್ಟೋಬರ್‌ 3ರಂದು ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT