ಕೋಲ್ಕತ್ತ: ಬಿಜೆಪಿ ಕೈಗೊಂಡಿದ್ದ ‘ನಬಾನ್ನ ಚಲೊ ಅಭಿಯಾನ’ (ರಾಜ್ಯ ಸಚಿವಾಲಯಕ್ಕೆ ಕಾಲ್ನಡಿಗೆ ಜಾಥಾ) ಮಂಗಳವಾರ ಹಿಂಸಾಚಾರಕ್ಕೆ ತಿರುಗಿತ್ತು.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ‘ಭೋಗಿಜಿ ಅಜಯ್ ಭೀಷ್ತ್ (ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ) ಮಾದರಿಯನ್ನು ಪಶ್ಚಿಮ ಬಂಗಾಳದಲ್ಲಿ ಬಳಸಬಹುದೇ? ನಿನ್ನೆ ಸಾರ್ವಜನಿಕ ಆಸ್ತಿಯನ್ನು ನಾಶಪಡಿಸಿದ ಬಿಜೆಪಿ ಕಾರ್ಯಕರ್ತರ ಮನೆಗೆ ಬುಲ್ಡೋಜರ್‌ಗಳನ್ನು ಕಳುಹಿಸಬಹುದೇ? ತನ್ನ ನೀತಿಯ ಪರ ಬಿಜೆಪಿ ನಿಲ್ಲುತ್ತದೆಯೇ’ ಎಂದು ಪ್ರಶ್ನಿಸಿದ್ದಾರೆ.

‘ಬಿಜೆಪಿಯ ಹೊಸ ಶಿಕ್ಷಣ ನೀತಿಯಲ್ಲಿ ಅಧ್ಯಾಯ 1: ಪೊಲೀಸ್ ವಾಹನವನ್ನು ಕ್ರಮಬದ್ಧವಾಗಿ ಸುಡುವುದು ಹೇಗೆ?’ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರ ಫೋಟೊ ಹಂಚಿಕೊಂಡಿರುವ ಮಹುವಾ, ‘ಕೋಲ್ಕತ್ತದಲ್ಲಿ ಬಿಜೆಪಿ ಮಂಗಗಳು’ ಎಂದು ಬರೆದುಕೊಂಡಿದ್ದಾರೆ.

ಮಂಗಳವಾರ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ನಡೆದ ಘರ್ಷಣೆ ತಾರಕಕ್ಕೇರಿ, ಕೋಲ್ಕತ್ತದ ಜನಜೀವನ ಅಸ್ತವ್ಯಸ್ತಗೊಂಡಿತು.

ಪ್ರತಿಭಟನಕಾರರು ನಗರದ ಕೇಂದ್ರ ಭಾಗದಲ್ಲಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿ, ಪೊಲೀಸರತ್ತ ಕಲ್ಲುಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಿ ಪ್ರತಿಭಟನಕಾರರನ್ನು ಚದುರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.