ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

Last Updated 19 ಮಾರ್ಚ್ 2023, 10:42 IST
ಅಕ್ಷರ ಗಾತ್ರ

ದುರ್ಗಾಪುರ: ಪಶ್ಚಿಮ ಬಂಗಾಳದ ದುರ್ಗಾಪುರ ನಗರದಲ್ಲಿ ವ್ಯಕ್ತಿಯೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ಕುರಿಲಿಯದಂಗ ಪ್ರದೇಶದಲ್ಲಿರುವ ಮನೆಯಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.

ವ್ಯಕ್ತಿಯ(40) ಮೃತದೇಹ ನೇತಾಡುತ್ತಿತ್ತು, ಆತನ 35 ವರ್ಷದ ಪತ್ನಿ ಹಾಗೂ ಮಕ್ಕಳು ಹಾಸಿಗೆಯ ಮೇಲೆ ಶವವಾಗಿ ಕಂಡುಬಂದಿದ್ದಾರೆ. (2) ವರ್ಷದ ಹೆಣ್ಣು ಮಗು ಮತ್ತು (10) ವರ್ಷದ ಗಂಡು ಮಗು ಈ ಘಟನೆಯಲ್ಲಿ ಮೃತಪಟ್ಟಿದೆ. ಕೋಣೆಗೆ ಒಳಗಿನಿಂದ ಬೀಗ ಹಾಕಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವ್ಯಕ್ತಿಯು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆತನ ನೆರೆಹೊರೆಯವರು ಆರೋಪಿಸಿದ್ದಾರೆ. ವ್ಯಕ್ತಿ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT