ಶನಿವಾರ, ಏಪ್ರಿಲ್ 1, 2023
23 °C

ಪಶ್ಚಿಮ ಬಂಗಾಳ: ರಾಜ್ಯಪಾಲರ ಭಾಷಣಕ್ಕೆ ಬಿಜೆಪಿ ಶಾಸಕರಿಂದ ಅಡ್ಡಿ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಹೊಸದಾಗಿ ರಚನೆಯಾದ ಪಶ್ಚಿಮ ಬಂಗಾಳದ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರ ಭಾಷಣಕ್ಕೆ ವಿರೋಧ ಪಕ್ಷವಾದ ಬಿಜೆಪಿಯ ಶಾಸಕರು ಅಡ್ಡಿಪಡಿಸಿದರು.

ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ ಇಲ್ಲ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದೆ ಪ್ರತಿಭಟನೆ ನಡೆಸಿದರು. ಹಿಂಸಾಚಾದಲ್ಲಿ ಬಲಿಯಾದವರ ಪೋಸ್ಟರ್‌, ಚಿತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸದಸ್ಯರ ಗದ್ದಲ ಹೆಚ್ಚಾಗುತ್ತಿದ್ದಂತೆ ರಾಜ್ಯಪಾಲರು ಭಾಷಣವನ್ನು ಮೊಟಕುಗೊಳಿಸಿದರು. ರಾಜ್ಯಪಾಲರ ಭಾಷಣ ಕೇವಲ ನಾಲ್ಕು ನಿಮಿಷಕ್ಕೆ ಸೀಮಿತವಾಯಿತು. ಸದನದಲ್ಲಿ ಟಿಎಂಸಿ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಂಯಮ ತೋರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು