ಮಂಗಳವಾರ, ಜೂನ್ 22, 2021
24 °C

ಕೋವಿಡ್‌: ಪಶ್ಚಿಮ ಬಂಗಾಳದಲ್ಲಿ ಇದೇ 16ರಿಂದ30 ರವರೆಗೆ ಲಾಕ್‌ಡೌನ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ : ಪಶ್ಚಿಮ ಬಂಗಾಳದಲ್ಲಿ ಕೋವಿಡ್‌–19 ವ್ಯಾಪಕವಾಗುತ್ತಿರುವ ಕಾರಣ ರಾಜ್ಯದಾದ್ಯಂತ ಇದೇ 16ರಿಂದ (ಭಾನುವಾರ) 30ರವರೆಗೆ ಪೂರ್ಣ ಪ್ರಮಾಣದ ಲಾಕ್‌ಡೌನ್‌ ಘೋಷಿಸಲಾಗಿದೆ.

‘ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಭಾನುವಾರ ಬೆಳಿಗ್ಗೆ 6 ರಿಂದ ಇದೇ 30ರ ಸಂಜೆ 6ರವರೆಗೆ ಲಾಕ್‌ಡೌನ್‌ ಜಾರಿಯಲ್ಲಿರುತ್ತದೆ’ ಎಂದು ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ತಿಳಿಸಿದರು.

ಈ ಅವಧಿಯಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಶಾಪಿಂಗ್ ಮಾಲ್‌ಗಳು, ಬಾರ್‌ಗಳು, ಕ್ರೀಡಾ ಸಂಕೀರ್ಣಗಳು, ಪಬ್‌ಗಳು ಮತ್ತು ಬ್ಯೂಟಿ ಪಾರ್ಲರ್‌ಗಳು ಮುಚ್ಚಿರುತ್ತವೆ ಎಂದರು.

15 ದಿನಗಳ ಲಾಕ್‌ಡೌನ್ ಅವಧಿಯಲ್ಲಿ ಖಾಸಗಿ ವಾಹನಗಳು, ಟ್ಯಾಕ್ಸಿಗಳು, ಬಸ್‌ಗಳು, ಮೆಟ್ರೊ ರೈಲು, ಉಪನಗರ ರೈಲುಗಳ ಚಲನೆಯೂ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದರು.

ಅಗತ್ಯ ಸೇವೆಗಳಾದ ಹಾಲು, ನೀರು, ಔಷಧ, ವಿದ್ಯುತ್, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಮಾಧ್ಯಮಗಳು ಅದರ ವ್ಯಾಪ್ತಿಗೆ ಬರುವುದಿಲ್ಲ. ಪೆಟ್ರೋಲ್ ಪಂಪ್‌ಗಳು ಕಾರ್ಯ ನಿರ್ವಹಿಸುತ್ತವೆ ಎಂದು ಅವರು ಹೇಳಿದರು.

ಇ-ಕಾಮರ್ಸ್ ಮತ್ತು ಗೃಹ ವಿತರಣಾ ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು