ಗುರುವಾರ , ಡಿಸೆಂಬರ್ 1, 2022
20 °C

ಪಶ್ಚಿಮ ಬಂಗಾಳ: 2023ರ ಅಂತ್ಯಕ್ಕೆ ಜಗನ್ನಾಥ ದೇವಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೀಘಾ: ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ದಿಘಾದಲ್ಲಿ ₹100 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಜಗನ್ನಾಥ ದೇವಾಲಯದ ನಿರ್ಮಾಣ ಕಾರ್ಯವು 2023ರ ಡಿಸೆಂಬರ್‌ಗೆ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. 

ಇಲ್ಲಿಯ ಕರಾವಳಿ ತೀರದಲ್ಲಿ 20 ಎಕರೆ ಪ್ರದೇಶದಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ. ಪಶ್ಚಿಮ ಬಂಗಾಳ ವಸತಿ ಮೂಲಸೌಕರ್ಯ ಅಭಿವೃದ್ಧಿ ನಿಗಮವು(ಡಬ್ಲ್ಯುಬಿಎಚ್‌ಐಡಿಸಿಒ) ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ಒಡಿಶಾದ ಪುರಿ ಜಗನ್ನಾಥ ದೇವಾಲಯದ ಮಾದರಿಯಲ್ಲೇ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ. 65 ಮೀಟರ್‌ ಎತ್ತರದ ಈ ದೇವಾಲಯದಲ್ಲಿ ಜಗನ್ನಾಥ, ಬಲಭದ್ರ ಮತ್ತು ಸುಭದ್ರಾ ದೇವತೆಗಳ ಮೂರ್ತಿ ಇರಲಿದೆ ಎಂದು ಡಬ್ಲ್ಯುಬಿಎಚ್‌ಐಡಿಸಿಒ ಮುಖ್ಯ ಎಂಜಿನಿಯರ್‌ ಸುಮನ್‌ ನಿಯೋಗಿ ತಿಳಿಸಿದ್ದಾರೆ.

ನಿರ್ಮಾಣ ಕೆಲಸ ಪೂರ್ಣವಾದ ಬಳಿಕ ದೀಘಾ ಶಂಕರಪುರ ಅಭಿವೃದ್ಧಿ ಪ್ರಾಧಿಕಾರವು ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. 

‘ಪುರಿ ಜಗನ್ನಾಥ ದೇವಸ್ಥಾನವನ್ನೇ ಹೋಲುವ ದೇವಸ್ಥಾನವನ್ನು ಪಶ್ಚಿಮ ಬಂಗಾಳದಲ್ಲಿ ನಿರ್ಮಿಸಬೇಕು ಎಂಬುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕನಸು. ಅದನ್ನು ನನಸಾಗಿಸಲು ಸುಮಾರು 200 ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದಿಂದ ತರಿಸಲಾದ ಕೆಂಪು ಕಲ್ಲಿನಿಂದ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು