ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು, ಪುದುಚೇರಿ ಚುನಾವಣೆ: ಮತ ಎಣಿಕೆ ಇಂದು

Last Updated 1 ಮೇ 2021, 21:43 IST
ಅಕ್ಷರ ಗಾತ್ರ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಐದು ವಿಧಾನಸಭೆಗಳ ಚುನಾವಣಾ ಫಲಿತಾಂಶ ಭಾನುವಾರ (ಮೇ 2) ಪ್ರಕಟವಾಗಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ಹೊತ್ತಿಗೆ ಚಿತ್ರಣ ಸಿಗುವ ನಿರೀಕ್ಷೆ ಇದೆ. 14 ರಾಜ್ಯಗಳ ಉಪಚುನಾವಣೆಯ ಫಲಿತಾಂಶವೂ ಪ್ರಕಟವಾಗಲಿದೆ.

ಪಶ್ಚಿಮ ಬಂಗಾಳದ 294, ಅಸ್ಸಾಂನ 126, ಕೇರಳದ 140, ತಮಿಳುನಾಡಿನ 234 ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ, ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು.

ಕೋವಿಡ್ ಕಾರಣದಿಂದ, ಫಲಿತಾಂಶ ಪ್ರಕಟವಾದ ಬಳಿಕ ಸಂಭ್ರಮಾಚರಣೆ ನಡೆಸುವಂತಿಲ್ಲ ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.ಮೆರವಣಿಗೆ, ರ‍್ಯಾಲಿ ನಡೆಸುವಂತಿಲ್ಲ ಎಂದು ರಾಜಕೀಯ ಪಕ್ಷಗಳಿಗೆ ತಿಳಿಸಲಾಗಿದೆ.

ಮತಎಣಿಕೆ ಕೇಂದ್ರದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ. ಮಾಸ್ಕ್ ಧರಿಸುವಿಕೆ, ಅಂತರ ಕಾಯ್ದುಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ. ಮತಗಟ್ಟೆ ಪ್ರವೇಶಿಸುವ ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿರಬೇಕು ಅಥವಾ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದೂ ಆಯೋಗ ತಿಳಿಸಿದೆ.

ಪಟಾಕಿ ಸಿಡಿಸಿ ಸಂಭ್ರಮಿಸುವ, ಗುಂಪಾಗಿ ಸೇರುವಿಕೆ ಮೇಲೆ ಮದ್ರಾಸ್ ಹೈಕೋರ್ಟ್ ನಿರ್ಬಂಧ ವಿಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT