ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಮತಾ ಮೇಲೆ ದಾಳಿ ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡಲು ಟಿಎಂಸಿ, ಬಿಜೆಪಿ ಚಿಂತನೆ

Last Updated 11 ಮಾರ್ಚ್ 2021, 7:45 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿರುವ ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ.

ಇದೇ ವೇಳೆ, ಮಮತಾ ಅವರ ಆರೋಪವನ್ನು ಸುಳ್ಳೆಂದು ಪ್ರತಿಪಾದಿಸಿರುವ ಬಿಜೆಪಿಯೂ ಸಹ ಚುನಾವಣಾ ಆಯೋಗದ ಮೊರೆ ಹೋಗಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಮಮತಾ ಅವರ ಮೇಲೆ ಹಲ್ಲೆ ನಡೆದ ವಿಚಾರವಾಗಿ ದೂರು ನೀಡಲು ಟಿಎಂಸಿ ನಾಯಕರ ನಿಯೋಗವೊಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ. ಈ ಘಟನೆಯ ಬಗ್ಗೆ ಸರಿಯಾದ ತನಿಖೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಬಿಜೆಪಿಯು ಒತ್ತಾಯಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಮಮತಾ ಅವರ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ವರದಿ ಕೇಳಿದೆ.

'ಕೆಲವು ಅಪರಿಚಿತರು ತಮ್ಮನ್ನು ತಳ್ಳಿದ್ದೂ ಅಲ್ಲದೇ ಎಡಗಾಲಿಗೆ ಗಾಯ ಆಗುವಂತೆ ಕಾರಿನ ಬಾಗಿಲನ್ನು ಬಲವಾಗಿ ಮುಚ್ಚಿದ್ದಾರೆ' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಾರ್ಚ್‌ 27ರಂದು ವಿಧಾನಸಭೆ ಚುನಾವಣೆ ಆರಂಭವಾಗಲಿದ್ದು, 8 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 29ಕ್ಕೆ ಮತದಾನ ಮುಕ್ತಾಯಗೊಳ್ಳಲಿದೆ. ಮೇ 2ರಂದು ಚುನಾವಣಾ ಫಲಿತಾಂಶ ಹೊರಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT