ಗುರುವಾರ , ಮೇ 6, 2021
32 °C

ಪಶ್ಚಿಮ ಬಂಗಾಳ: ಮಮತಾ ಮೇ 5ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮೇ 5ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಟಿಎಂಸಿ ಹಿರಿಯ ಮುಖಂಡ ಪಾರ್ಥ ಚಟರ್ಜಿ ಸೋಮವಾರ ಪ್ರಕಟಿಸಿದ್ದಾರೆ.

ಎಂಟು ಹಂತಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ 292 ಸ್ಥಾನಗಳ ಪೈಕಿ 212 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮಮತಾ ಸತತ 3ನೇ ಅವಧಿಗೆ ಅಧಿಕಾರ ಉಳಿಸಿಕೊಂಡಿದ್ದಾರೆ. 77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಬಿಜೆಪಿಯು ಪ್ರಮುಖ ವಿರೋಧ ಪಕ್ಷವಾಗಿ ರೂಪುಗೊಂಡಿದೆ.

ಫಲಿತಾಂಶ ಹೊರ ಬೀಳುತ್ತಿದ್ದಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್‌ ಧನಖಡ್‌, ಮಮತಾ ಅವರ ಪಕ್ಷದ ಗೆಲುವಿಗೆ ಶುಭಾಶಯ ಕೋರಿ ಟ್ವೀಟಿಸಿದ್ದರು. ಹಾಗೇ, ಸೋಮವಾರ ರಾತ್ರಿ 7ಕ್ಕೆ ರಾಜ ಭವನದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದರು.

2011ರಲ್ಲಿ ಮಮತಾ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಈ ಚುನಾವಣೆಯಲ್ಲಿ ಮಮತಾ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಸೋತಿದ್ದಾರೆ. ಭಾನುವಾರ ಪಶ್ಚಿಮ ಬಂಗಾಳ ಸೇರಿದಂತೆ ಇತರೆ ಐದು ವಿಧಾನಸಭೆಗಳ ಫಲಿತಾಂಶ ಪ್ರಕಟಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು