ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಗಳಿಗೆ ಬೆಂಕಿ, 10 ಮಂದಿ ಸಜೀವ ದಹನ; ಟಿಎಂಸಿ ಮುಖಂಡನ ಹತ್ಯೆಗೆ ಪ್ರತೀಕಾರ!

ಪಶ್ಚಿಮ ಬಂಗಾಳ
Last Updated 22 ಮಾರ್ಚ್ 2022, 7:36 IST
ಅಕ್ಷರ ಗಾತ್ರ

ಕೋಲ್ಕತ್ತ: ಗ್ರಾಮದ ಟಿಎಂಸಿ ಮುಖಂಡರೊಬ್ಬರ ಹತ್ಯೆಯ ಬೆನ್ನಲ್ಲೇ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ಕನಿಷ್ಠ 10 ಮಂದಿ ಸಜೀವ ದಹನವಾಗಿರುವುದಾಗಿ ವರದಿಯಾಗಿದೆ.

ಪಶ್ಚಿಮ ಬಂಗಾಳದ ಬಿರ್‌ಭುಮ್‌ನ ರಾಮಪುರಹಾಟ್‌ನ ಬಗುಟಿ ಗ್ರಾಮ ಪಂಚಾಯಿತಿ ಮುಖಂಡ‌ ಭಾದು ಶೇಖ್‌ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ–60ರಲ್ಲಿ ಅಂಗಡಿಯೊಂದರಲ್ಲಿ ಇರುವಾಗ ಶೇಖ್‌ ಅವರ ಮೇಲೆ ಬಾಂಬ್‌ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು.

ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪು ಅವರ ಗ್ರಾಮದಲ್ಲಿನ ವಿರೋಧಿ ಗುಂಪಿನ ಕೆಲವು ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಕೆಲವು ಮನೆಗಳಿಗೆ ಬೆಂಕಿ ಹಚ್ಚಿದ ಪರಿಣಾಮ, ಕನಿಷ್ಠ 10 ಮಂದಿ ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ.

ಸೋಮವಾರ ರಾತ್ರಿ ಸುಮಾರು 10ರಿಂದ 12 ಮನೆಗಳು ಬೆಂಕಿಯಲ್ಲಿ ಹೊತ್ತು ಉರಿದಿರುವುದಾಗಿ ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಸುಟ್ಟು ಕರಕಲಾಗಿರುವ ಕನಿಷ್ಠ ಹತ್ತು ದೇಹಗಳು ಪತ್ತೆಯಾಗಿವೆ. ದೇಹಗಳು ಸಂಪೂರ್ಣ ಸುಟ್ಟಿರುವುದರಿಂದ ವ್ಯಕ್ತಿಗಳ ಗುರುತು ಪತ್ತೆ ಮಾಡುವುದು ಸಾಧ್ಯವಾಗಿಲ್ಲ. ಒಂದೇ ಮನೆಯಲ್ಲಿ ಏಳು ದೇಹಗಳು ಸಿಕ್ಕಿದ್ದು, ಎಲ್ಲ ದೇಹಗಳನ್ನು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಮುಖಂಡ ಶೇಖ್‌ ಅವರ ಹತ್ಯೆಯ ಸಂಬಂಧ ಈವರೆಗೂ ಪೊಲೀಸರು ಒಬ್ಬ ಆರೋಪಿಯನ್ನುಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT