ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ಸಚಿವ ಬಂಧನ: ಮಮತಾ ಬ್ಯಾನರ್ಜಿ ಮೌನವನ್ನು ಟೀಕಿಸಿದ ಬಿಜೆಪಿ

Last Updated 24 ಜುಲೈ 2022, 9:58 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ವಾಣಿಜ್ಯ ಮತ್ತು ಉದ್ಯಮ ಸಚಿವ ಪಾರ್ಥ ಚಟರ್ಜಿ ಅವರ ಬಂಧನವಾಗಿದ್ದು, ಆ ವಿಚಾರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೌನ ವಹಿಸಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಶಿಕ್ಷಣ ಸಚಿವರಾಗಿದ್ದ ವೇಳೆ ನಡೆದಿದ್ದ ನೇಮಕಾತಿ ಅಕ್ರಮದ ಕುರಿತಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಚಿವ ಪಾರ್ಥ ಚಟರ್ಜಿಯನ್ನು ಬಂಧಿಸಿದ್ದರು.

ಸಚಿವ ಚಟರ್ಜಿಯವರು ಮಮತಾ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು, ತಮ್ಮ ಸಂಪುಟದ ಸಚಿವರ ಬಂಧನ ಕುರಿತು ಮಮತಾ ಬ್ಯಾನರ್ಜಿ ಅವರ ಮೌನ ನಿಜಕ್ಕೂ ಅಚ್ಚರಿ ತರಿಸಿದೆ. ಮಮತಾ ಅವರು ಚಟರ್ಜಿ ಅವರಿಂದ ಈಗ ಅಂತರ ಕಾಯ್ದುಕೊಂಡರೂ, ಅವರ ಸಂಘಟಿತ ಅಪರಾಧಗಳ ಕುರಿತು ಎಲ್ಲರಿಗೂ ತಿಳಿದಿದೆ ಎಂದು ಟೀಕಿಸಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು, ಮಮತಾ ಅವರು ಕೇಂದ್ರದ ತನಿಖಾ ಸಂಸ್ಥೆಗಳನ್ನು ದೂರುವುದರಲ್ಲಿಯೇ ನಿರತರಾಗಿರುತ್ತಾರೆ. ಅತ್ಯಂತ ವ್ಯವಸ್ಥಿತವಾಗಿ ಅವರು ಮಾಡಿರುವ ಅಪರಾಧಗಳನ್ನು ಮುಚ್ಚಿಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT