ಭಾನುವಾರ, ಜನವರಿ 17, 2021
20 °C

ಪಶ್ಚಿಮ ಬಂಗಾಳ: ಸಚಿವ ಸ್ಥಾನಕ್ಕೆ ಲಕ್ಷ್ಮಿ ರತನ್‌ ಶುಕ್ಲಾ ರಾಜೀನಾಮೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವ ಲಕ್ಷ್ಮಿ ರತನ್‌ ಶುಕ್ಲಾ ಅವರು ಮಂಗಳವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶುಕ್ಲಾ ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗದೀಪ್‌ ಧನ್‌ಕರ್‌ ಅವರಿಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಸಾರಿಗೆ ಸಚಿವ ಸುವೇಂದು ಅಧಿಕಾರಿ ಟಿಎಂಸಿ ಪಕ್ಷ ತೋರೆದು ಹದಿನೈದು ದಿನಗಳ ಬಳಿಕ ಇದೀಗ ಶುಕ್ಲಾ ರಾಜೀನಾಮೆ ನೀಡಿರುವುದು ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ತಕ್ಕಮಟ್ಟಿಗೆ ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪಶ್ಚಿಮ ಬಂಗಾಳದ ರಣಜಿ ತಂಡದ ಮಾಜಿ ನಾಯಕ, 39 ವರ್ಷದ ಶುಕ್ಲಾ ಅವರು ಹೌರಾ (ಉತ್ತರ) ಕ್ಷೇತ್ರದ ಶಾಸಕರಾಗಿದ್ದು, ರಾಜಕೀಯದಿಂದ ನಿವೃತ್ತಿ ಹೊಂದಲು ನಿರ್ಧರಿಸಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ಲಾ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಶುಕ್ಲಾ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕ್ರೀಡೆಗಾಗಿ ಹೆಚ್ಚಿನ ಸಮಯ ನೀಡಲು ಬಯಸಿದ್ದು, ಶಾಸಕರಾಗಿ ಮುಂದುವರಿಯಲಿದ್ದಾರೆ. ಇದನ್ನು ನಕಾರಾತ್ಮಕ ರೀತಿಯಲ್ಲಿ ತೆಗೆದುಕೊಳ್ಳುವುದು ಬೇಡ’ ಎಂದು ಹೇಳಿದ್ದಾರೆ.

ರಾಜೀನಾಮೆ ಅಂಗೀಕಾರ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲಹೆ ಮೇರೆಗೆ ರಾಜ್ಯಪಾಲ ಜಗದೀಪ್‌ ಧನ್‌ಕರ್‌ ಅವರು ಸಚಿವ ಲಕ್ಷ್ಮಿ ರತನ್ ಶುಕ್ಲಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಬ್ಯಾನರ್ಜಿ ಶಿಫಾರಸು ಮಾಡಿದಂತೆ ಯುವ ಜನ ಮತ್ತು ಕ್ರೀಡಾ ಇಲಾಖೆ ಉಸ್ತುವಾರಿಯನ್ನು ಅರೂಪ್‌ ಬಿಸ್ವಾಸ್‌ಗೆ ವಹಿಸಲಾಗುವುದು ಎಂದು ಧಂಕರ್‌ ಆದೇಶದಲ್ಲಿ ತಿಳಿಸಿದ್ದಾರೆ.

ಅರೂಪ್‌ ಬಿಸ್ವಾಸ್ ಯುವ ಜನ ಮತ್ತು ಕ್ರೀಡಾ ಇಲಾಖೆ ಸಚಿವರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು