ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ಥ ಚಟರ್ಜಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಬೇಕಿಲ್ಲ: ಏಮ್ಸ್ ಅಧಿಕಾರಿ

Last Updated 25 ಜುಲೈ 2022, 14:47 IST
ಅಕ್ಷರ ಗಾತ್ರ

ಭುವನೇಶ್ವರ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಅಗತ್ಯವಿಲ್ಲ ಎಂದು ಏಮ್ಸ್ ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು (ಇ.ಡಿ) ಸೋಮವಾರ ಬೆಳಿಗ್ಗೆ ವೈದ್ಯಕೀಯ ಪರೀಕ್ಷೆಗಾಗಿ ಭುವನೇಶ್ವರಕ್ಕೆ ಕರೆದೊಯ್ದಿದ್ದಾರೆ.

ಚಟರ್ಜಿ ಅವರನ್ನು ಸಂಪೂರ್ಣ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದೇವೆ. ಅವರು ದೀರ್ಘಕಾಲೀನ ಕೆಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಆದರೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿಕೊಳ್ಳಬೇಕಿಲ್ಲ ಎಂದು ಏಮ್ಸ್ ಕಾರ್ಯನಿರ್ವಾಹಕ ನಿರ್ದೇಶಕ ಆಶುತೋಷ್ ವಿಶ್ವಾಸ್ ತಿಳಿಸಿದ್ದಾರೆ.

ಚಟರ್ಜಿ ಅವರ ಆರೋಗ್ಯದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕಲ್ಕತ್ತ ಹೈಕೋರ್ಟ್‌ ನಿರ್ದೇಶನದ ಮೇರೆಗೆ ಇ.ಡಿ ಅಧಿಕಾರಿಗಳು ಪಾರ್ಥ ಚಟರ್ಜಿ ಅವರನ್ನು ಬೆಳಿಗ್ಗೆ 9ರ ಸುಮಾರಿಗೆ ಕೋಲ್ಕತ್ತ ವಿಮಾನ ನಿಲ್ದಾಣದಿಂದ ಭುವನೇಶ್ವರಕ್ಕೆ ಏರ್ ಆಂಬುಲೆನ್ಸ್ ಮೂಲಕ ಕರೆದೊಯ್ದಿದ್ದರು. ಬಳಿಕ ಅವರ ಆರೋಗ್ಯ ಪರೀಕ್ಷಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT