ಕೋಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣದ ಆರೋಪಿ, ಪಶ್ಚಿಮ ಬಂಗಾಳದ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ಮಮತಾ ಬ್ಯಾನರ್ಜಿ ಸರ್ಕಾರವು ಸಚಿವ ಸ್ಥಾನದಿಂದ ವಜಾಗೊಳಿಸಿದೆ.

ವಜಾಗೊಳಿಸಿದ ಆದೇಶದ ಪ್ರತಿಯನ್ನು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಅಪಾರ್ಟ್‌ಮೆಂಟ್‌ನಿಂದ ಆಸ್ತಿ ಹಾಗೂ ವಿದೇಶಿ ವಿನಿಮಯದ ದಾಖಲೆ ಸಹಿತ ಸರಿ ಸುಮಾರು ₹50 ಕೋಟಿ ನಗದು ಮತ್ತು ಕೆ.ಜಿಗಟ್ಟಲೆ ಚಿನ್ನವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪಾರ್ಥ ಚಟರ್ಜಿ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಸಿಪಿಐ(ಎಂ) ಆರೋಪಿಸಿದ್ದವು.

ಇದನ್ನೂ ಓದಿ:ದೇಶದಾದ್ಯಂತ ಸುದ್ದಿಯಲ್ಲಿರುವ ನಟಿ ಅರ್ಪಿತಾ ಮುಖರ್ಜಿ ಯಾರು? ಆಕೆಯ ಹಿನ್ನೆಲೆ ಏನು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.