ಭಾನುವಾರ, ಜುಲೈ 3, 2022
25 °C

ಪಶ್ಚಿಮ ಬಂಗಾಳದ ಸಚಿವ ಸಾಧನ್ ಪಾಂಡೆ ನಿಧನ: ಸಿ.ಎಂ ಮಮತಾ ಬ್ಯಾನರ್ಜಿ ಸಂತಾಪ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ಸಚಿವ ಹಾಗೂ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ ಸಾಧನ್ ಪಾಂಡೆ ಅವರು ಇಂದು (ಭಾನುವಾರ) ಬೆಳಗ್ಗೆ ಮುಂಬೈಯಲ್ಲಿ ನಿಧನರಾಗಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ‘ನಮ್ಮ ಹಿರಿಯ ಸಹೋದ್ಯೋಗಿ, ಪಕ್ಷದ ನಾಯಕ ಮತ್ತು ಸಂಪುಟ ಸಚಿವ ಸಾಧನ್ ಪಾಂಡೆ ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ನಮ್ಮ ನಡುವೆ ಉತ್ತಮ ಬಾಂಧವ್ಯವಿತ್ತು. ಅವರ ಅಗಲಿಕೆ ತೀವ್ರ ನೋವುಂಟು ಮಾಡಿದೆ. ಅವರ ಕುಟುಂಬಸ್ಥರು, ಸ್ನೇಹಿತರು ಹಾಗೂ ಕಾರ್ಯಕರ್ತರಿಗೆ ನನ್ನ ಸಂತಾಪಗಳು’ ಎಂದು ಹೇಳಿದ್ದಾರೆ. 

ಸಾಧನ್ ಪಾಂಡೆ ಅವರು ಸ್ವ-ಉದ್ಯೋಗ ಮತ್ತು ಸ್ವಸಹಾಯ ಗುಂಪುಗಳು ಹಾಗೂ ಗ್ರಾಹಕ ವ್ಯವಹಾರಗಳ ಖಾತೆ ಸಚಿವರಾಗಿದ್ದರು. 

ಓದಿ...  ಸುಳ್ಳು ಮಾಹಿತಿ ನೀಡಿ ಬಾರ್‌ ಲೈಸನ್ಸ್‌ ಪಡೆದ ಸಮೀರ್ ವಾಂಖೆಡೆ: ಎಫ್‌ಐಆರ್ ದಾಖಲು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು