ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಎಸಗುತ್ತಿರುವ ಪಾಪಗಳಿಗೆ ಜನರು ಏಕೆ ಬಳಲಬೇಕು: ಮಮತಾ ಬ್ಯಾನರ್ಜಿ ಪ್ರಶ್ನೆ

ಅಕ್ಷರ ಗಾತ್ರ

ಕೋಲ್ಕತ್ತ: ಪ್ರವಾದಿ ಮಹಮ್ಮದರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಮುಖಂಡರನ್ನು ಬಂಧಿಸಬೇಕೆಂದು ಒತ್ತಾಯಿಸಿ ಪಶ್ಚಿಮ ಬಂಗಾಳದಲ್ಲಿ ಎರಡನೇ ದಿನವೂ ಪ್ರತಿಭಟನೆಗಳು ನಡೆದಿವೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ಕೆಲವು ರಾಜಕೀಯ ಪಕ್ಷಗಳು ಗಲಭೆಗಳನ್ನು ಸೃಷ್ಟಿಸಲು ಯತ್ನಿಸುತ್ತಿವೆ. ಬಿಜೆಪಿ ಎಸಗುತ್ತಿರುವ ಪಾಪಗಳಿಗೆ ಜನರು ಏಕೆ ಬಳಲಬೇಕು?’ ಎಂದು ಪ್ರಶ್ನಿಸಿದ್ದಾರೆ.

‘ನಾನು ಈ ವಿಚಾರವಾಗಿ ಮೊದಲೇ ಹೇಳಿದ್ದೇನೆ. ಈಗ ಎರಡು ದಿನಗಳಿಂದ ಹೌರಾದಲ್ಲಿ ಸಾಮಾನ್ಯ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ಹಿಂಸಾಚಾರವು ರಾಜಕೀಯ ಸಂಚಿನ ಭಾಗವಾಗಿದೆ. ಕೆಲವು ರಾಜಕೀಯ ಪಕ್ಷಗಳು ಇದರ ಹಿಂದೆ ಇವೆ. ಆ ಪಕ್ಷಗಳು ಗಲಭೆಗಳನ್ನು ಪ್ರಚೋದಿಸಲು ಬಯಸುತ್ತಿವೆ’ ಎಂದು ಮಮತಾ ಕಿಡಿಕಾರಿದ್ದಾರೆ.

‘ಆದರೆ, ಇದನ್ನು ನಾನು ಸಹಿಸುವುದಿಲ್ಲ. ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬಿಜೆಪಿ ಪಾಪ ಮಾಡಿದೆ. ಜನರು ತೊಂದರೆ ಅನುಭವಿಸುತ್ತಾರೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಕೋಲ್ಕತ್ತ ಸಮೀಪದ ಹೌರಾದಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT