ಬುಧವಾರ, ಆಗಸ್ಟ್ 10, 2022
24 °C

ಗಂಗಾ ನದಿಯಲ್ಲಿ ತೇಲಿಬರುವ ಶವಗಳು: ಪಶ್ಚಿಮ ಬಂಗಾಳದಲ್ಲಿ ಮುನ್ನೆಚ್ಚರಿಕೆ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

Credit: AFP Photo

ಕೋಲ್ಕತಾ: ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಗಂಗಾ ನದಿಯಲ್ಲಿ  ಕೋವಿಡ್ ಶವಗಳ ರಾಶಿ ತೇಲಿ ಬಂದಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದೆ.

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಮೂಲಕ ಗಂಗಾ ನದಿಯಲ್ಲಿ ಶವಗಳ ರಾಶಿ ತೇಲಿಬರುವ ಸಾಧ್ಯತೆಯಿರುವುದರಿಂದ ಸ್ಥಳೀಯಾಡಳಿತ ಮತ್ತು ಪೊಲೀಸ್ ಇಲಾಖೆ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಶವಗಳು ತೇಲಿಬಂದರೆ ಅಂತಹ ಸನ್ನಿವೇಶವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುವುದು ಮತ್ತು ನೆರೆರಾಜ್ಯ ಜಾರ್ಖಂಡ್‌ನಿಂದ ಗಂಗಾ ನದಿಯಲ್ಲಿ ಶವಗಳು ಬಂದಲ್ಲಿ ಅವುಗಳನ್ನು ಕೋವಿಡ್ ನಿಯಮಾವಳಿಗೆ ಅನುಗುಣವಾಗಿ ಶವಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.

ಅಲ್ಲದೆ, ಈ ಪ್ರಕ್ರಿಯೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಆರೋಗ್ಯ ಇಲಾಖೆ ಜಂಟಿಯಾಗಿ ನಿರ್ವಹಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು