ಗುರುವಾರ , ಅಕ್ಟೋಬರ್ 6, 2022
23 °C
ಪಶ್ಚಿಮ ಬಂಗಾಳ

ಶಿಕ್ಷಕರ ನೇಮಕಾತಿ ಹಗರಣ: ಸಿಬಿಐ ತನಿಖೆಯ ಆದೇಶ ಎತ್ತಿಹಿಡಿದ ಕಲ್ಕತ್ತಾ ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ಶುಕ್ರವಾರ ಎತ್ತಿಹಿಡಿದಿದೆ. 

ನ್ಯಾಯಮೂರ್ತಿಗಳಾದ ಸುಬ್ರತಾ ತಾಲೂಕ್ಡರ್ ಮತ್ತು ಲಪಿತಾ ಬ್ಯಾನರ್ಜಿ ಅವರನ್ನೊಳಗೊಂಡ ವಿಭಾಗೀಯ ಪೀಠವು ತನಿಖೆಯನ್ನು ಏಕಸದಸ್ಯ ಪೀಠವು ಮೇಲ್ವಿಚಾರಣೆ ನಡೆಸಲಿದೆ ಎಂದೂ ತಿಳಿಸಿದೆ.

 

ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿದ್ದ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರ ಆದೇಶವನ್ನು ಎತ್ತಿಹಿಡಿದ ಪೀಠವು, ಅಗತ್ಯಬಿದ್ದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಕುರಿತಾಗಿ ತನಿಖೆ ನಡೆಸಲಾಗುವುದು ಎಂದೂ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು