ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದ ಅರಣ್ಯ ಸಚಿವ ರಾಜೀನಾಮೆ

Last Updated 22 ಜನವರಿ 2021, 8:03 IST
ಅಕ್ಷರ ಗಾತ್ರ

ಕೋಲ್ಕತ್ತ: ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಅರಣ್ಯ ಸಚಿವ ಸ್ಥಾನಕ್ಕೆ ರಾಜಿವ್ ಬ್ಯಾನರ್ಜಿ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

'ಪಶ್ಚಿಮ ಬಂಗಾಳದ ಜನರ ಸೇವೆ ಮಾಡುವುದಕ್ಕೆ ಅವಕಾಶ ದೊರೆತಿದ್ದು ನನ್ನ ಭಾಗ್ಯ. ಈ ಅವಕಾಶಕ್ಕಾಗಿ ಮನಸಾರೆ ಕೃತಜ್ಞತೆ ಸಲ್ಲಿಸುತ್ತೇನೆ ' ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯಪಾಲರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣ ಬಹಿರಂಗ ಪಡಿಸಿಲ್ಲ.

ಮಾರ್ಚ್‌–ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇತ್ತೀಚೆಗೆ ಟಿಎಂಸಿ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವ ಬೆಳವಣಿಗೆಗಳು ನಡೆದಿವೆ.

ಡಿಸೆಂಬರ್‌ನಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಸಂಪುಟ ಸಚಿವ ಸುವೆಂದು ಅಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಪ್ರಮುಖ ಮುಖಂಡರು ಆಗಾಗ್ಗೆ ಪಶ್ಚಿಮ ಬಂಗಾಳದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT