ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಮಮತಾ ಮನವಿ ತಿರಸ್ಕರಿಸಿದ ಚುನಾವಣಾ ಆಯೋಗ, ಇಂದು ಆರನೇ ಹಂತದ ಮತದಾನ

Last Updated 22 ಏಪ್ರಿಲ್ 2021, 1:31 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಆರನೇ ಹಂತದ ಮತದಾನ ಇಂದು (ಗುರುವಾರ) ಆರಂಭವಾಗಿದ್ದು, ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇದೇ 26 ಮತ್ತು 29ರಂದು ಏಳು ಮತ್ತು ಎಂಟನೇ ಹಂತದ ಮತದಾನ ನಡೆಯಲಿದೆ.

ದೇಶದಲ್ಲಿ ಕೋವಿಡ್‌ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಕಾರಣಕ್ಕೆ ಮೂರು ಹಂತಗಳ ಮತದಾನವನ್ನು ಒಂದೇ ಬಾರಿ ನಡೆಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ ‘ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಾಕಿ ಉಳಿದಿರುವ ಮೂರು ಹಂತಗಳ ಮತದಾನವನ್ನು ಒಂದೇ ದಿನ ನಡೆಸಬೇಕು ಎಂಬ ಟಿಎಂಸಿ ಬೇಡಿಕೆ ಜಾರಿ ಸಾಧ್ಯವಿಲ್ಲ’ ಎಂದು ಹೇಳಿದೆ.

ಆಯೋಗವು ಟಿಎಂಸಿಗೆ ಪತ್ರ ಬರೆದು, ಕೋವಿಡ್‌ನಿಂದ ಮತದಾರರನ್ನು ರಕ್ಷಿಸುವುದಕ್ಕಾಗಿ ಕೈಗೊಂಡ ಕ್ರಮಗಳನ್ನು ವಿವರಿಸಿದೆ. ಚುನಾವಣೆಗೆ ಸಂಬಂಧಿಸಿದ ಕಾನೂನುಗಳನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮತದಾನದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

ಇಂದು ಪುರ್ಬಾ ಬರ್ಧಮಾನ್, ನಡಿಯಾ, ಉತ್ತರ 24 ಪರಗಣ ಜಿಲ್ಲೆಗಳಲ್ಲಿ 43 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT