ಭಾನುವಾರ, ಮೇ 29, 2022
21 °C

ಬಹುಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ: ಇಬ್ಬರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಣ್ಣೂರು, ಕೇರಳ: ಕಣ್ಣೂರು ಜಿಲ್ಲೆಯ ತಳಿಪ್ಪರಂಬದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ (ಅಂಬೆರ್ಗ್ರಿಸ್) ಮಾರಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

ಜಿಲ್ಲೆಯ ಕೊಯಿಪ್ರಮ್‌ನ ಇಸ್ಮಾಯಿಲ್ ಮತ್ತು ಬೆಂಗಳೂರಿನ ಅಬ್ದುಲ್ ರಶೀದ್ ಅವರನ್ನು ಬಂಧಿಸಲಾಗಿದೆ ಎಂದು ತಿರುವನಂತಪುರಂನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ಮಲಪ್ಪುರಂ ಜಿಲ್ಲೆಯ ನಿಲಂಬೂರಿನ ವ್ಯಕ್ತಿಗಳಿಗೆ 9 ಕೆ.ಜಿ ತೂಕದ ಅಂಬರ್‌ಗ್ರೀಸ್ ಅನ್ನು ಸುಮಾರು ₹30 ಕೋಟಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು