ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕಾ ಕೇಂದ್ರದ ಬಳಿ ಜನಸಂದಣಿ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆಯೇ: ಕೇರಳ ಹೈಕೋರ್ಟ್

Last Updated 9 ಆಗಸ್ಟ್ 2021, 6:07 IST
ಅಕ್ಷರ ಗಾತ್ರ

ಕೊಚ್ಚಿ: ಕೋವಿಡ್‌ ಲಸಿಕಾ ಕೇಂದ್ರಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇರಳ ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಲೆ ಅವರನ್ನೊಳಗೊಂಡ ಪೀಠ, ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುವ ವೇಳೆ ಸರ್ಕಾರಕ್ಕೆ ಈ ಪ್ರಶ್ನೆ ಕೇಳಿದೆ.

ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ತೆಗೆದುಕೊಂಡ ಕ್ರಮಗಳನ್ನು ಪೂರಕ ದಾಖಲೆಗಳೊಂದಿಗೆ ವಿವರಿಸುವಂತೆ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿತು.

ರಾಜ್ಯದ ಲಸಿಕಾ ಕೇಂದ್ರಗಳ ಹೊರಗೆ ತುಂಬಾ ಜನಜಂಗುಳಿಯಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಗಳನ್ನು ಆಧರಿಸಿ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಆರಂಭಿಸಿತು.

ಈ ಅರ್ಜಿಯ ಮುಂದಿನ ವಿಚಾರಣೆ ಆಗಸ್ಟ್ 11ಕ್ಕೆನಿಗದಿಯಾಗಿದ್ದು, ಅಷ್ಟರೊಳಗೆ, ಸರ್ಕಾರ ತಾನು ತಾನು ತೆಗೆದುಕೊಂಡ ಕ್ರಮಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಪೀಠ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT