ಶನಿವಾರ, ಮಾರ್ಚ್ 25, 2023
22 °C

2015ರ ಪ್ರವಾಹದ ಬಳಿಕ ಏನು ಮಾಡಿದ್ದೀರಿ? ಚೆನ್ನೈ ಪಾಲಿಕೆಗೆ ಹೈಕೋರ್ಟ್ ಪ್ರಶ್ನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಚೆನ್ನೈ: ಮಳೆಯಿಂದಾಗಿ ನಗರವು ಜಲಾವೃತವಾಗುವುದನ್ನು ತಪ್ಪಿಸಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಚೆನ್ನೈ ಮಹಾನಗರ ಪಾಲಿಕೆ ವಿಫಲವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹಾಗೆಯೇ, 2015ರ ಪ್ರವಾಹದ ಬಳಿಕ ಸಂಬಂಧಪಟ್ಟ ಇಲಾಖೆಗಳು ಏನು ಮಾಡುತ್ತಿವೆ ಎಂದು ಪ್ರಶ್ನಿಸಿದೆ.

ಪ್ರವಾಹ ಪರಿಸ್ಥಿತಿಯು ನಿಯಂತ್ರಣಕ್ಕೆ ಬಾರದಿದ್ದರೆ, ಸ್ವಯಂಪ್ರೇರಿತವಾಗಿ ‍ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಿದೆ.

ಮಳೆಯಿಂದಾಗಿ ತಮಿಳುನಾಡಿನಾದ್ಯಂತ 558 ಗುಡಿಸಲು ಮತ್ತು 5 ಮನೆಗಳಿಗೆ ಹಾನಿಯಾಗಿದೆ. ಇದುವರೆಗೆ ಐದು ಮಂದಿ ಮೃತಪಟ್ಟಿದ್ದಾರೆ. ಹವಾಮಾನ ಇಲಾಖೆಯು ಮುಂದಿನ ಮೂರುದಿನಗಳ (ನವೆಂಬರ್ 11) ವರೆಗೆ ನಗರದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು