ಮಂಗಳವಾರ, ಆಗಸ್ಟ್ 16, 2022
22 °C

ಎಲ್ಲಿದೆ ಪಿಎಂ ಕೇರ್ಸ್‌ನ ಹಣ; ಮಮತಾ ಬ್ಯಾನರ್ಜಿ ಪ್ರಶ್ನೆ

ಪಿಟಿಐ Updated:

ಅಕ್ಷರ ಗಾತ್ರ : | |

Mamata Banerjee

ಕೋಲ್ಕತ್ತ: ಕೇಂದ್ರ ಸರ್ಕಾರವು ಕೇಂದ್ರದ ಸಂಸ್ಥೆಗಳನ್ನು ದೇಶದ ಒಕ್ಕೂಟ ವ್ಯವಸ್ಥೆಯನ್ನು ನೆಲಸಮ ಮಾಡಲು ಬಳಸುತ್ತಿದೆ. ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ಪರಿಹಾರ (ಪಿಎಂ ಕೇರ್ಸ್) ನಿಧಿಯ ಹಣ ಎಲ್ಲಿ ಹೋಗಿದೆ ಎಂಬುದನ್ನು ತಿಳಿಯಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಒತ್ತಾಯಿಸಿದ್ದಾರೆ.

ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಆಡಳಿತದ ಇಚ್ಛೆಗೆ ಮತ್ತು ಬಯಕೆಯ ಪ್ರಕಾರ ತಮ್ಮ ಸರ್ಕಾರ ಕಾರ್ಯನಿರ್ವಹಿಸುವುದಿಲ್ಲ ಎಂದು ಬ್ಯಾನರ್ಜಿ ಹೇಳಿದರು.

ಪಿಎಂ ಕೇರ್ಸ್ ಫಂಡ್‌ನ ಹಣ ಎಲ್ಲಿ ಹೋಗಿದೆ? ಈ ನಿಧಿಗಳ ಭವಿಷ್ಯದ ಬಗ್ಗೆ ಯಾರಿಗಾದರೂ ತಿಳಿದಿದೆಯೇ? ನಿಧಿಯ ಲಕ್ಷ ಕೋಟಿ ಹಣ ಎಲ್ಲಿ ಹೋಗಿದೆ? ಏಕೆ ಇದಕ್ಕೆ ಲೆಕ್ಕಪರಿಶೋಧನೆ ಮಾಡಲಿಲ್ಲ? ಕೇಂದ್ರವು ನಮಗೆ ಉಪನ್ಯಾಸ ನೀಡುತ್ತಿದೆ. ಆದರೆ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಅವರು ನಮಗೆ ಏನು ನೀಡಿದ್ದಾರೆ ಎಂದು ಪ್ರಶ್ನಿಸಿದರು.

ದೇಶದ ಇತರ ರಾಜ್ಯಗಳಿಗಿಂತ ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿದೆ. ನಮ್ಮನ್ನು ನೆಲಸಮ ಮಾಡಲು ಮತ್ತು ಬೆದರಿಸಲು ಕೇಂದ್ರವು ಏಜೆನ್ಸಿಗಳನ್ನು ಬಳಸುತ್ತಿದೆ. ನಾವು ಅವರಿಗೆ ಹೆದರುವುದಿಲ್ಲ. ಅವರು (ಬಿಜೆಪಿ) ರಾಜಕೀಯ ಪಕ್ಷವಲ್ಲ, ಸುಳ್ಳುಗಳ ಕಸದ ರಾಶಿಯಾಗಿದೆ ಎಂದು ದೂರಿದ್ದಾರೆ.

294 ವಿಧಾನಸಭಾ ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷದ ಏಪ್ರಿಲ್-ಮೇನಲ್ಲಿ ಚುನಾವಣೆ ನಡೆಯಲಿದೆ.

ಉತ್ತರ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೃಷಿ ಕಾನೂನುಗಳ ವಿಷಯದಲ್ಲಿ ಬೇರೆ ಯಾವುದೇ ರಾಜಕೀಯ ಪಕ್ಷಗಳು ಬಿಜೆಪಿಯನ್ನು ಬೆಂಬಲಿಸಲಿಲ್ಲ. ಆದರೆ ಕೇಸರಿ ಪಕ್ಷವು ಅದನ್ನು ನೆಲಸಮ ಮಾಡುವಲ್ಲಿ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು