ಬುಧವಾರ, ಸೆಪ್ಟೆಂಬರ್ 29, 2021
20 °C

ಭಾರತೀಯ ವಿದ್ಯಾರ್ಥಿಗಳಿಗಿದ್ದ ಪ್ರಯಾಣ ನಿರ್ಬಂಧ ಸಡಿಲಿಸಿವೆ ಈ ರಾಷ್ಟ್ರಗಳು... 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ:  ಅಮೆರಿಕ, ಇಂಗ್ಲೆಂಡ್‌, ಕೆನಡಾ, ಐರ್ಲೆಂಡ್ ಮತ್ತು ಜರ್ಮನಿ ಸೇರಿದಂತೆ ಹಲವು ದೇಶಗಳು ಭಾರತೀಯ ವಿದ್ಯಾರ್ಥಿಗಳಿಗೆ ಕೋವಿಡ್‌-19 ಸಂಬಂಧಿತ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಿವೆ ಎಂದು ವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವ ವಿ ಮುರಳೀಧರನ್ ಸಂಸತ್ತಿಗೆ ಗುರುವಾರ ಮಾಹಿತಿ ನೀಡಿದ್ದಾರೆ. 

ನೆದರ್‌ಲೆಂಡ್‌, ಬೆಲ್ಜಿಯಂ, ಲಕ್ಸೆಂಬರ್ಗ್ ಮತ್ತು ಜಾರ್ಜಿಯಾಕ್ಕೆ ಹೋಗುವ ವಿದ್ಯಾರ್ಥಿಗಳಿಗೂ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.  

ಕೋವಿಡ್‌–19 ಪರಿಸ್ಥಿತಿ ಸುಧಾರಿಸುತ್ತಲೇ ಮತ್ತಷ್ಟು ದೇಶಗಳು ನಮ್ಮ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವ ನಿರೀಕ್ಷೆಗಳಿವೆ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು