ಗುರುವಾರ , ಮಾರ್ಚ್ 4, 2021
30 °C

ಹಿಮನದಿ ಸ್ಫೋಟ | ಇಡೀ ದೇಶವೇ ಉತ್ತರಾಖಂಡದೊಂದಿಗೆ ನಿಲ್ಲಲಿದೆ: ರಾಹುಲ್ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಹಿಮನದಿ ಸ್ಫೋಟದಿಂದ ಸಂಕಷ್ಟಕ್ಕೆ ಸಿಲುಕಿರುವ ಉತ್ತರಾಖಂಡದ ಚಮೋಲಿ ಜಿಲ್ಲೆಯ ಜನರಿಗೆ ಧೈರ್ಯ ತುಂಬಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಇಡೀ ದೇಶವೇ ಉತ್ತರಾಖಂಡ ಜನರೊಂದಿಗೆ ನಿಲ್ಲಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಅವರು, ‘ಮುಂದಿನ ಕೆಲವು ದಿನಗಳ ಕಾಲ ನಡೆಯುವ ಪರಿಹಾರ ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರ್ಕಾರಗಳು ನೋಡಿಕೊಳ್ಳಬೇಕಾಗಿರುವುದು ಬಹು ಮುಖ್ಯವಾದ ಕೆಲಸ‘ ಎಂದು ಅವರು ಹೇಳಿದ್ದಾರೆ.

‘ಹಿಮನದಿ ಸ್ಫೋಟದಿಂದ ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಗಳ ಜತೆಗೆ ನಾನು ಹೃತ್ಪೂರ್ವಕವಾಗಿ ನಿಲ್ಲುತ್ತೇನೆ. ನಿಮ್ಮ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ‘ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ಹಿಮನದಿ ಸ್ಫೋಟದಿಂದಾಗಿ 10 ಜನರು ಸಾವನ್ನಪ್ಪಿದ್ದರೆ, 140 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು