ಮಂಗಳವಾರ, ಅಕ್ಟೋಬರ್ 26, 2021
21 °C

ಲಖಿಂಪುರ–ಖೇರಿ ಘಟನೆ: ಪ್ರಧಾನಿ ಮೌನ ಪ್ರಶ್ನಿಸಿದ ಸಿಬಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲಖಿಂಪುರ ಖೇರಿ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ಮೌನವಹಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಪ್ರಶ್ನಿಸಿದ್ದಾರೆ.

‘ಲಖಿಂಪುರ ಖೇರಿ ಘಟನೆ ಭಯಾನಕವಾದದ್ದು. ಮೋದಿ ಜೀ, ನೀವೇಕೆ ಮೌನವಾಗಿದ್ದೀರಿ? ನಿಮ್ಮಿಂದ ಕೇವಲ ಒಂದು ಅನುಕಂಪದ ಮಾತನ್ನು ನಾವು ನಿರೀಕ್ಷಿಸುತ್ತೇವೆ. ಅದು ಕಷ್ಟವಾಗಬಾರದು’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ನೀವು ವಿರೋಧ ಪಕ್ಷದಲ್ಲಿ ಇದ್ದಿದ್ದರೆ ಹೇಗೆ ಪ್ರತಿಕ್ರಿಯಿಸುತ್ತಿದ್ದಿರಿ? ದಯವಿಟ್ಟು ನಮಗೆ ತಿಳಿಸಿ’ ಎಂದು ಅವರು ಕೇಳಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಸಿಬಲ್‌ ಅವರು ಈ ವಾರದ ಆರಂಭದಲ್ಲಿ ಸುಪ್ರೀಂ ಕೋರ್ಟ್‌ ಅನ್ನು ಆಗ್ರಹಿಸಿದ್ದರು.

ಈ ಕುರಿತು ಸುಪ್ರೀಂಕೋರ್ಟ್‌ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರಿಂದ ಸಿಬಲ್‌ ಅವರು ಮುಖ್ಯ ನ್ಯಾಯಮೂರ್ತಿಗೆ ಧನ್ಯವಾದ ಅರ್ಪಿಸಿದ್ದಾರೆ. ಭಾರತದಲ್ಲಿ ನ್ಯಾಯಾಲಯಗಳು ಧ್ವನಿ ಇಲ್ಲದವರ ನಂಬಿಕೆಯನ್ನು ಪುನಃ ಸ್ಥಾಪಿಸುವ ದೇವಾಲಯಗಳಾಗಿವೆ ಎಂದು ಹೇಳಿದ್ದಾರೆ.

ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಮಾಡುತ್ತಿದ್ದ ಒಂದು ಗುಂಪು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಲಖಿಂಪುರ ಖೇರಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದಾಗ, ಎರಡು ಎಸ್‌ಯವಿಗಳು ಹರಿದು ನಾಲ್ವರು ರೈತರು ಮೃತಪಟ್ಟರು. ಇದರಿಂದ ಕೋಪಗೊಂಡ ಪ್ರತಿಭಟನಕಾರರು ಬಿಜೆಪಿಯ ಇಬ್ಬರು ಕಾರ್ಯಕರ್ತರು ಮತ್ತು ಚಾಲಕನನ್ನು ಕೊಂದರು. ಈ ಹಿಂಸಾಚಾರದಲ್ಲಿ ಸ್ಥಳೀಯ ಪತ್ರಕರ್ತರೊಬ್ಬರೂ ಮೃತಪಟ್ಟಿದ್ದಾರೆ.

ಈ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ವಿಚಾರಣೆಗೆ ಕರೆದಿದ್ದಾರೆ.

ಇವನ್ನೂ ಓದಿ


ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು