ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿಷೇಕ್ ಬ್ಯಾನರ್ಜಿ ವಿಚಾರಣೆ ಕೋಲ್ಕತ್ತದಲ್ಲೇ ನಡೆಸಿ: ಸುಪ್ರೀಂ ಕೋರ್ಟ್ ಸೂಚನೆ

ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ
Last Updated 12 ಮೇ 2022, 21:45 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕ ಅಭಿಷೇಕ್ ಬ್ಯಾನರ್ಜಿ ಅವರನ್ನು ದೆಹಲಿಗೆ ಕರೆಸಿಕೊಂಡು ವಿಚಾರಣೆ ನಡೆಸುವ ಬದಲು ಕೋಲ್ಕತ್ತದಲ್ಲೇ ಏಕೆ ನಡೆಸುತ್ತಿಲ್ಲ ಎಂದು ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯವನ್ನು(ಇ.ಡಿ) ಪ್ರಶ್ನಿಸಿದೆ.

ನ್ಯಾಯಮೂರ್ತಿ ಯು.ಯು. ಲಲಿತ್ ಅವರಿದ್ದ ಪೀಠವು ಗುರುವಾರ ವಿಚಾರಣೆ ವೇಳೆ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಭಿಷೇಕ್ ಬ್ಯಾನರ್ಜಿ ಅವರು ಸಾಕ್ಷಿದಾರರಾಗಿದ್ದು, ಅವರೇನು ಆರೋಪಿಯಲ್ಲ ಎಂದು ಹೇಳಿದೆ.

ಈ ವೇಳೆ ಇ.ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ಅಭಿಷೇಕ್ ಬ್ಯಾನರ್ಜಿ ಅವರು ಪ್ರಭಾವಿ ನಾಯಕರಾಗಿದ್ದು, ಈ ಹಿಂದೆ ಸಿಬಿಐ ಅಧಿಕಾರಿಗಳನ್ನು ಘೇರಾವ್ ಹಾಕಿದ್ದ ವಿಚಾರವನ್ನು ಉದಾಹರಿಸಿ, ಕೇಂದ್ರೀಯ ಸಂಸ್ಥೆಗಳನ್ನು ಕೋಲ್ಕತ್ತದಲ್ಲಿ ಹೇಗೆ ನಡೆಸಿಕೊಳ್ಳಲಾಗುತ್ತದೆ ಎಂಬುದು ಈಗಾಗಲೇ ನ್ಯಾಯಾಲಯ ಗಮನಿಸಿದೆ ಎಂದು ಹೇಳಿದರು.

ಈ ವೇಳೆ ಕೋಲ್ಕತ್ತದಲ್ಲಿ ಯಾವುದೇ ನಾಯಕರ ವಿಚಾರಣೆಗೆ ಕೇಂದ್ರೀಯ ತನಿಖಾ ಸಂಸ್ಥೆಗಳು ಬಂದಾಗ, ರಾಜ್ಯ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಪಶ್ಚಿಮ ಬಂಗಾಳ ಸರ್ಕಾರವನ್ನು ಹೊಣೆಯಾಗಿಸಬೇಕು. ವಿಚಾರಣೆಗೆ ಹೋಗುವ 72 ಗಂಟೆಗಳ ಮುಂಚಿತವಾಗಿ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಆಗ ರಾಜ್ಯ ಪೊಲೀಸರು, ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ ಸಹಕಾರ ನೀಡಲಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT