ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದಾನಿ ಬಿಕ್ಕಟ್ಟು: ಜೆಪಿಸಿ ಅಥವಾ 'ಸುಪ್ರೀಂ' ಮೇಲ್ವಿಚಾರಣೆಯ ತನಿಖೆಗೆ ಆಗ್ರಹ

Last Updated 2 ಫೆಬ್ರುವರಿ 2023, 9:18 IST
ಅಕ್ಷರ ಗಾತ್ರ

ನವದೆಹಲಿ: ಅದಾನಿ ಸಮೂಹದ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಗುರುವಾರ ಒತ್ತಾಯಿಸಿವೆ.

ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತೇವೆ. ಈ ವಿವಾದದ ಕುರಿತು ತನಿಖೆಯ ದಿನನಿತ್ಯದ ವರದಿ ಕೂಡ ಸಲ್ಲಿಕೆಯಾಗಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸಂಸತ್ತಿನಲ್ಲೂ ಈ ವಿವಾದ ಪ್ರತಿಧ್ವನಿಸಿತು. ಆದರೆ ಪ್ರತಿಪಕ್ಷಗಳ ಬೇಡಿಕೆಯನ್ನು ಸಭಾಧ್ಯಕ್ಷರು ತಿರಸ್ಕರಿಸಿದರು.

ಈ ಗಂಭೀರ ಸ್ವರೂಪದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಏಕೆ ಮೌನ ವಹಿಸುತ್ತಿವೆ ಎಂದು ವಿಪಕ್ಷ ನಾಯಕರು ಪ್ರಶ್ನಿಸಿದ್ದಾರೆ.

ಎಲ್‌ಐಸಿ, ಎಸ್‌ಬಿಐ ಸೇರಿದಂತೆ ಸಾರ್ವಜನಿಕ ಸಂಸ್ಥೆಗಳು, ಅದಾನಿ ಸಮೂಹದಲ್ಲಿ ಭಾರಿ ಹೂಡಿಕೆ ಮಾಡಿವೆ. ಸಾರ್ವಜನಿಕ ಹಣದ ಕುರಿತು ಜನರು ಆತಂಕಗೊಂಡಿದ್ದಾರೆ ಎಂದು ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT