ಬುಧವಾರ, ಅಕ್ಟೋಬರ್ 21, 2020
21 °C

ಪ್ರಧಾನಿ ಬಳಿ ಸಿಎಂ ನಿಮ್ಮ ಭವಿಷ್ಯ ಒತ್ತೆಯಿಡುವುದೇಕೆ: ರಾಹುಲ್ ಗಾಂಧಿ ಪ್ರಶ್ನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿ ಸಾಲ ಪಡೆಯುವ ಕೇಂದ್ರದ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿರುವ ವಿವಿಧ ರಾಜ್ಯ ಸರ್ಕಾರಗಳ ನಿಲುವನ್ನು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.

‘ನಿಮ್ಮಗಳ ಭವಿಷ್ಯವನ್ನು ನಿಮ್ಮ ಮುಖ್ಯಮಂತ್ರಿಯು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಏಕೆ ‘ಒತ್ತೆ’ ಇಡುತ್ತಿದ್ದಾರೆ?’ ಎಂದೂ ಅವರು ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಿರುವ ರಾಜ್ಯಗಳ ಜನತೆಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್‌ ಗಾಂಧಿ ಜಿಎಸ್‌ಟಿಗೆ ಸಂಬಂಧಿಸಿದಂತೆ ಐದು ಅಂಶಗಳನ್ನು ಉಲ್ಲೇಖಿಸಿ, ಜನರಿಗೆ ಮೇಲಿನಂತೆ ಪ್ರಶ್ನೆ ಮಾಡಿದ್ದಾರೆ.

1. ಜಿಎಸ್‌ಟಿ ಆದಾಯ ಕೊಡಲಾಗುವುದು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಭರವಸೆ ನೀಡಿತ್ತು.

2. ಪ್ರಧಾನಿ ಮತ್ತು ಕೋವಿಡ್‌ನಿಂದಾಗಿ ಆರ್ಥಿಕತೆ ಅಸ್ತವ್ಯಸ್ತಗೊಂಡಿತು.

3. ಪ್ರಧಾನಿಯಿಂದ ಕಾರ್ಪೊರೇಟ್ ಕಂಪನಿಗಳಿಗೆ ₹ 1.4 ಲಕ್ಷ ಕೋಟಿ ತೆರಿಗೆ ಕಡಿತದ ನೆರವು ಮತ್ತು ತಮಗಾಗಿ ₹ 8,400 ಕೋಟಿ ವೆಚ್ಚದಲ್ಲಿ ಎರಡು ವಿಮಾನಗಳ ಖರೀದಿ.

4) ರಾಜ್ಯಗಳಿಗೆ ಕೊಡಲು ಕೇಂದ್ರದ ಬಳಿ ಹಣವಿಲ್ಲ.

5) ಸಾಲ ಪಡೆಯಲು ರಾಜ್ಯಗಳಿಗೆ ಹಣಕಾಸು ಸಚಿವರ ಸಲಹೆ‘ ಎಂಬ ಅಂಶಗಳನ್ನು ರಾಹುಲ್‌ ಗಾಂಧಿ ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜಿಎಸ್‌ಟಿ ಪರಿಹಾರ ಕುರಿತಂತೆ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು, ಬಹುತೇಕ ಬಿಜೆಪಿ ಆಡಳಿತವಿರುವ ಸುಮಾರು 21 ರಾಜ್ಯಗಳು ಬೆಂಬಲಿಸಿದ್ದು, ಪರಿಹಾರದ ಕೊರತೆ ನೀಗಿಕೊಳ್ಳಲು ₹ 1.10 ಲಕ್ಷ ಕೋಟಿ ಸಾಲ ಪಡೆಯಲು ಮುಂದಾಗಿವೆ. 

ಪ್ರಸಕ್ತ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಪರಿಹಾರ ಕೊರತೆಯನ್ನು ಭರಿಸುವ ಕ್ರಮವಾಗಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ₹ 20,000 ಕೋಟಿ ಬಿಡುಗಡೆ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು