ಶುಕ್ರವಾರ, ಜೂನ್ 18, 2021
23 °C

ಪ್ರಧಾನಿ ಮಹಾರಾಷ್ಟ್ರದಲ್ಲಿ ಏಕೆ ವೈಮಾನಿಕ ಸಮೀಕ್ಷೆ ನಡೆಸುತ್ತಿಲ್ಲ: ಎನ್‌ಸಿಪಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ತೌತೆ’ ಚಂಡಮಾರುತದಿಂದ ಮಹಾರಾಷ್ಟ್ರದಲ್ಲಿ ಆದ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ವೈಮಾನಿಕ ಸಮೀಕ್ಷೆ ನಡೆಸುತ್ತಿಲ್ಲ’ ಎಂದು ಎನ್‌ಸಿಪಿಯು ಬುಧವಾರ ಪ್ರಶ್ನಿಸಿದೆ.

‘ಪ್ರಧಾನಿ ಮೋದಿ ಅವರು ಬುಧವಾರ ಗುಜರಾತ್‌ ಮತ್ತು ನೆರೆಯ ಕೇಂದ್ರಾಡಳಿತ ಪ್ರದೇಶ ದಿಯುವಿನ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಈ ರೀತಿಯ ಸಮೀಕ್ಷೆಯನ್ನು ನಡೆಸಿಲ್ಲ. ಇದು ತಾರತಮ್ಯ ಅಲ್ಲವೇ?’ ಎಂದು ಎನ್‌ಸಿಪಿಯ ರಾಷ್ಟ್ರೀಯ ವಕ್ತಾರ ನವಾಬ್‌ ಮಲೀಕ್‌ ಅವರು ಟ್ವೀಟ್‌ ಮಾಡಿದ್ದಾರೆ.

ತೌತೆ ಚಂಡಮಾರುತವು ಸೋಮವಾರ ಮಧ್ಯರಾತ್ರಿ ಗುಜರಾತ್ ಪ್ರವೇಶಿಸುವುದಕ್ಕೂ ಮುನ್ನ ಮಹಾರಾಷ್ಟ್ರದ ಕರಾವಳಿ ಭಾಗದಲ್ಲೂ ಹಾನಿಯನ್ನುಂಟು ಮಾಡಿದೆ. ಏಳು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು