ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಜನಸಂಖ್ಯೆ ನಿಯಂತ್ರಿಸಿದ್ದಕ್ಕೆ ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳಬೇಕೆ'

Last Updated 22 ಆಗಸ್ಟ್ 2021, 15:22 IST
ಅಕ್ಷರ ಗಾತ್ರ

ಚೆನ್ನೈ: ಜನಸಂಖ್ಯೆಯನ್ನು ಆಧಾರವನ್ನಾಗಿಟ್ಟುಕೊಂಡು 1967ರಿಂದ ದಕ್ಷಿಣದ ರಾಜ್ಯಗಳಲ್ಲಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆ ಮಾಡಿರುವ ಬಗ್ಗೆ ಮದ್ರಾಸ್‌ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಅದರಲ್ಲೂ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳು ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿ ಜಾರಿಗೊಳಿಸಿವೆ. ಆದರೆ, ಈ ರಾಜ್ಯಗಳಲ್ಲಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆಗೊಳಿಸುವ ರಾಜಕೀಯ ಪ್ರಾತಿನಿಧ್ಯವನ್ನು ಕಸಿಯಲಾಗಿದೆ ಎಂದು ನ್ಯಾಯಮೂರ್ತಿಗಳಾದ ಕೃಪಾಕರನ್ ಹಾಗೂ ಪುಗಳೇಂದಿ ಅವರಿರುವ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

‘ಜನಸಂಖ್ಯೆ ನಿಯಂತ್ರಣ ಮಾಡದ ಉತ್ತರ ಭಾರತದ ರಾಜ್ಯಗಳಿಗೆ ಲಾಭವಾಗಿದೆ. ಹೆಚ್ಚು ಜನಸಂಖ್ಯೆ ಕಾರಣದಿಂದಾಗಿ ಆ ರಾಜ್ಯಗಳಿಗೆ ಸಂಸತ್‌ನಲ್ಲಿ ಅಧಿಕ ಪ್ರಾತಿನಿಧ್ಯ ಲಭಿಸಿದೆ. ಜನಸಂಖ್ಯೆ ನಿಯಂತ್ರಿಸುವ ರಾಜ್ಯಗಳು ಲೋಕಸಭಾ ಕ್ಷೇತ್ರಗಳನ್ನು ಏಕೆ ಕಳೆದುಕೊಳ್ಳಬೇಕು’ ಎಂದೂ ನ್ಯಾಯಪೀಠ ಪ್ರಶ್ನಿಸಿದೆ.

ತೆಂಕಾಸಿ ಲೋಕಸಭಾ ಕ್ಷೇತ್ರ ಕಳೆದ 56 ವರ್ಷಗಳಿಂದ ಮೀಸಲು ಕ್ಷೇತ್ರವಾಗಿದೆ. ಮೀಸಲಾತಿಯನ್ನು ತೆಗೆದು ಸಾಮಾನ್ಯ ಕ್ಷೇತ್ರವನ್ನಾಗಿ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ರಾಜಕೀಯ ಪಕ್ಷಗಳಾದ ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್‌ ಹಾಗೂ ಬಿಜೆಪಿಯನ್ನು ಈ ಪ್ರಕರಣದ ಕಕ್ಷಿಗಾರರನ್ನಾಗಿ ಮಾಡಿರುವ ಹೈಕೋರ್ಟ್‌, ಪ್ರತಿಕ್ರಿಯೆ ಸಲ್ಲಿಸುವಂತೆ ಈ ಎಲ್ಲ ಪಕ್ಷಗಳಿಗೆ ನೋಟಿಸ್‌ ಜಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT