ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುನ್ಮಾನ‌ ಮಾಧ್ಯಮಗಳ ಮೇಲೆ ನಿಯಂತ್ರಣ ಏಕಿಲ್ಲ: ಬಾಂಬೆ ಹೈಕೋರ್ಟ್‌

Last Updated 10 ಸೆಪ್ಟೆಂಬರ್ 2020, 14:25 IST
ಅಕ್ಷರ ಗಾತ್ರ

ಮುಂಬೈ: ಸುಶಾಂತ್ ಸಿಂಗ್‌ ಸಾವು‌ ಪ್ರಕರಣ ಸಂಬಂಧ ಬಿತ್ತರವಾಗುತ್ತಿರುವ ಸುದ್ದಿಗಳ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌,ಸರ್ಕಾರಗಳು ವಿದ್ಯುನ್ಮಾನ‌ ಮಾಧ್ಯಮಗಳ ಮೇಲೆ ನಿಯಂತ್ರಣ ಹೊಂದಿರದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದೆ.

ಮುಖ್ಯನ್ಯಾಯಮೂರ್ತಿ ದೀಪಾಂಕರ್‌ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್‌. ಕುಲಕರ್ಣಿ ಅವರಿದ್ದ ನ್ಯಾಯಪೀಠ,ಮಾಧ್ಯಮಗಳ ಸುದ್ದಿ ವಿಷಯದ ಮೇಲೆ ಸರ್ಕಾರ ಏಕೆ ನಿಯಂತ್ರಣ ಸಾಧಿಸಬಾರದು ಎಂದು ಪ್ರಶ್ನಿಸಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಈ ಪ್ರಕರಣದಲ್ಲಿ ಕಕ್ಷಿದಾರರನ್ನಾಗಿಸಿರುವ ನ್ಯಾಯಪೀಠ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.ಇಂತಹ ಪ್ರಕರಣಗಳ ವರದಿಗಳು ಸಂಕೀರ್ಣ ಸಮಸ್ಯೆಗಳನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣದ ಕುರಿತಾದ ಮಾಹಿತಿಗಳನ್ನು ತನಿಖಾ ದಳಗಳು ಸೋರಿಕೆ ಮಾಡುತ್ತಿವೆ ಎಂದು ಅರ್ಜಿದಾರರೊಬ್ಬರು ಆರೋಪಿಸಿದ್ದಾರೆ. ಹೀಗಾಗಿ, ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ), ಜಾರಿ ನಿರ್ದೇಶನಾಲಯವನ್ನು (ಇಡಿ) ನ್ಯಾಯಾಲಯ ಕಕ್ಷಿದಾರರನ್ನಾಗಿಸಿದೆ.

ಹಲವು ವಿದ್ಯುನ್ಮಾನ ಮಾಧ್ಯಮಗಳು ನಟ ಸುಶಾಂತ್‌ ಸಿಂಗ್‌ ಸಾವು ಪ್ರಕರಣದಲ್ಲಿ ತನಿಖೆಯನ್ನೇ ಪ್ರಾರಂಭಿಸಿವೆ. ಜೊತೆಗೆ ಮುಂಬೈ ಪೊಲೀಸರ ವಿರುದ್ಧ ದುರುದ್ದೇಶಪೂರಿತ ಅಭಿಯಾನವನ್ನು ನಡೆಸುತ್ತಿವೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರು ಮತ್ತು ಎಂಟು ಹಿರಿಯ ಪೊಲೀಸ್‌ ಅಧಿಕಾರಿಗಳು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಕಳೆದ ಸೆಪ್ಟೆಂಬರ್ 3 ರಂದು, ಮತ್ತೊಂದು ನ್ಯಾಯಪೀಠವು ಇದೇ ಪ್ರಕರಣ ಸಂಬಂಧ, ಅರ್ಜಿಯ ವಿಚಾರಣೆ ನಡೆಸಿತ್ತು. ಸುಶಾಂತ್ ಸಿಂಗ್ ರಜಪೂತ್‌ ಸಾವಿನ ಪ್ರಕರಣದ ಬೆಳವಣಿಗೆಗಳ ಕುರಿತು ಸುದ್ದಿ ಬಿತ್ತರಿಸುವಾಗ ಸಂಯಮ ಪ್ರದರ್ಶಿಸಬೇಕು ಎಂದು ಪತ್ರಿಕೆಗಳಿಗೆ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT