ಬುಧವಾರ, ಅಕ್ಟೋಬರ್ 5, 2022
26 °C

ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಯನ್ನು ಬೆಂಕಿ ಹಚ್ಚಿ ಕೊಂದ ಪತ್ನಿ

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಮಥುರಾ: ತನ್ನ ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಗೆ ಪತ್ನಿ ಬೆಂಕಿ ಹಚ್ಚಿ ಕೊಂದಿರುವ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.

ಸೋಮವಾರ ಸಂಜೆ ಕೋಸಿಕಲನ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಶೇಕಡ 80ರಷ್ಟು ಸುಟ್ಟ ಗಾಯಗಳಾಗಿದ್ದ ಪತಿಯು ಮಂಗಳವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದ್ದು, ಆಕೆಗೆ ವಿವಾಹೇತರ ಸಂಬಂಧವಿತ್ತು ಮತ್ತು ಆಕೆಯ ಪತಿ ಚಮನ್ ಪ್ರಕಾಶ್ ಅದನ್ನು ವಿರೋಧಿಸಿದ್ದರು.

ಇದೇ ವಿಚಾರವಾಗಿ ದಂಪತಿ ನಡುವೆ ವಾಗ್ವಾದ ನಡೆದಿದ್ದು, ಸೋಮವಾರ ಸಂಜೆ ಚಮನ್ ಗಾಢ ನಿದ್ದೆಯಲ್ಲಿದ್ದಾಗ ರೇಖಾ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ಚಮನ್‌ ಅವರ ಕಿರುಚಾಟ ಕೇಳಿ ಮನೆಗೆ ಬಂದ ನೆರೆಹೊರೆಯವರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ತೀವ್ರ ಸುಟ್ಟ ಗಾಯಗಳಾಗಿದ್ದ ಅವರು ದೆಹಲಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೋಸಿಕಲನ್ ಪೊಲೀಸ್ ಠಾಣೆಯ ಪ್ರಭಾರಿ ಅನುಜ್ ಕುಮಾರ್ ಮಾತನಾಡಿ, ಮೃತ ಚಮನ್ ಪ್ರಕಾಶ್ ಅವರ ಕುಟುಂಬದಿಂದ ನಾವು ದೂರು ಸ್ವೀಕರಿಸಿದ್ದೇವೆ. ರೇಖಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) 302 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು