ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ಬಂಗಲೆ ತೊರೆಯುವೆ: ಲೋಕಸಭೆ ಕಾರ್ಯಾಲಯಕ್ಕೆ ರಾಹುಲ್ ಗಾಂಧಿ ಪತ್ರ

Last Updated 28 ಮಾರ್ಚ್ 2023, 9:03 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಅಧಿಕೃತ ಬಂಗಲೆಯನ್ನು ಖಾಲಿ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಲೋಕಸಭಾ ಕಾರ್ಯಾಲಯದ ಉಪಕಾರ್ಯದರ್ಶಿಯ ಎಲ್ಲ ನಿರ್ದೇಶನಗಳನ್ನು ಪಾಲಿಸುವುದಾಗಿ ಅವರು ಪತ್ರ ಬರೆದಿದ್ದಾರೆ. ಬಂಗಲೆ ತೆರವು ಮಾಡಲು ಕಾಲಾವಕಾಶ ಕೇಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಮೋದಿ ಉಪನಾಮ ವ್ಯಂಗ್ಯ ಮಾಡಿದ್ದ ಪ್ರಕರಣದಲ್ಲಿ ದೋಷಿಯೆಂದು ತೀರ್ಪು ಬಂದ ಬಳಿಕ ರಾಹುಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಲೋಕಸಭೆಯ ಕಾರ್ಯಾಲಯವು ದೆಹಲಿಯ ಲುಟೆನ್ಸ್ ಪ್ರದೇಶದಲ್ಲಿ ತಮಗೆ ನೀಡಿರುವ ನಂ 12, ತುಘಲಕ್ ಲೇನ್‌ನ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಿತ್ತು.

ನೋಟಿಸ್‌ಗೆ ಪ್ರತಿಕ್ರಿಯಿಸಿರುವ ರಾಹುಲ್, ಕಳೆದ ನಾಲ್ಕು ಅವಧಿಗಳಲ್ಲಿ ಲೋಕಸಭೆಯ ಚುನಾಯಿತ ಸದಸ್ಯನಾಗಿ, ನಾನು ಇಲ್ಲಿ ಕಳೆದ ಸಮಯದ ಸಂತೋಷದ ನೆನಪುಗಳು ನನ್ನ ಜೊತೆಗಿವೆ. ನಾನು ಖಂಡಿತವಾಗಿಯೂ ನಿಮ್ಮ ಪತ್ರದಲ್ಲಿರುವ ನಿರ್ದೇಶನಗಳಿಗೆ ಬದ್ಧನಾಗಿರುತ್ತೇನೆ’ಎಂದು ಸಂಕ್ಷಿಪ್ತ ಪತ್ರದಲ್ಲಿ ತಿಳಿಸಿದ್ದಾರೆ.

ಲೋಕಸಭಾ ಸದಸ್ಯತ್ವದಿಂದ ಅನರ್ಹರಾದ ದಿನದಿಂದ ಗರಿಷ್ಠ ಒಂದು ತಿಂಗಳ ಅವಧಿಗೆ ಅಂದರೆ ಏಪ್ರಿಲ್ 22ರವರೆಗೆ ಅವರು ಬಂಗಲೆಯಲ್ಲಿ ಉಳಿದುಕೊಳ್ಳಲು ಅನುಮತಿಸಲಾಗಿದೆ ಎಂದು ಲೋಕಸಭಾ ಕಾರ್ಯಾಲಯದ ಉಪ ಕಾರ್ಯದರ್ಶಿ ರಾಜನ್ ತಿಳಿಸಿದ್ದರು.

ಈ ಮೂಲಕ ರಾಹುಲ್‌ ಅವರನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

‘ರಾಹುಲ್ ತಮ್ಮ ಬಂಗಲೆಯನ್ನು ಖಾಲಿ ಮಾಡಿದರೆ, ತನ್ನ ತಾಯಿಯೊಂದಿಗೆ ವಾಸಿಸುತ್ತಾರೆ ಅಥವಾ ಅವರು ನನ್ನ ಮನೆಗೆ ಬರಬಹುದು, ನಾನು ಅವರಿಗಾಗಿ ಮನೆ ಖಾಲಿ ಮಾಡುತ್ತೇನೆ’ ಎಂದು ಖರ್ಗೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT