ಗುರುವಾರ , ಡಿಸೆಂಬರ್ 8, 2022
18 °C

ರಾಜ್ಯಪಾಲ ಹುದ್ದೆ ‘ರಬ್ಬರ್‌ ಸ್ಟ್ಯಾಂಪ್‌’ ಅಲ್ಲ: ಆರಿಫ್‌ ಮೊಹಮ್ಮದ್‌ ಖಾನ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಜ್ಯಪಾಲರ ಹುದ್ದೆ ‘ರಬ್ಬರ್‌ ಸ್ಟ್ಯಾಂಪ್‌’ ಅಲ್ಲ. ಅನುಮೋದನೆಗೆ ಏನಾದರೂ ಬಂದಾಗ ಅವರು ತಮ್ಮ ಇಚ್ಛೆಗೆ ಅನುಗುಣವಾಗಿ ನಡೆದುಕೊಳ್ಳುತ್ತಾರೆ ಎಂದು ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಶುಕ್ರವಾರ ಹೇಳಿದ್ದಾರೆ.

ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿಯೇತರ ಸರ್ಕಾರಗಳಿರುವ ಎಲ್ಲಾ ರಾಜ್ಯಗಳಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ತಿಕ್ಕಾಟವಿದೆ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದೂ ತಿಳಿಸಿದ್ದಾರೆ.

ಕೇರಳ ಸರ್ಕಾರ ಮತ್ತು ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ನಡುವೆ ಈಚೆಗೆ ಹಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು