ಮಂಗಳವಾರ, ಮಾರ್ಚ್ 2, 2021
19 °C

ನಾಲ್ಕೈದು ದಿನಗಳಲ್ಲಿ ಆಸ್ಪತ್ರೆಯಿಂದ ಮನೆಗೆ: ಶ್ರೀಪಾದ್‌ ನಾಯಕ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಣಜಿ: ಕಾರು ಅಪಘಾತದಲ್ಲಿ ಗಾಯಗೊಂಡು ಗೋವಾದ ಜಿಎಂಸಿಎಚ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್‌ ನಾಯಕ್‌  4–5 ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳುವುದಾಗಿ ತಿಳಿಸಿದರು.

ಜನವರಿ 12 ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಶ್ರೀಪಾದ್ ನಾಯಕ್ ಅವರು ತೀವ್ರವಾಗಿ ಗಾಯಗೊಂಡಿದ್ದರು.

‘ಎಲ್ಲರ ಪ್ರಾರ್ಥನೆ ಮತ್ತು ದೇವರ ಆರ್ಶೀವಾದದ ಫಲವಾಗಿ ನಾನು ಬೇಗ ಗುಣಮುಖನಾಗುತ್ತಿದ್ದೇನೆ. ಹಾಗಾಗಿ ನನ್ನನ್ನು ನೋಡಲು ಜನರು ಆಸ್ಪತ್ರೆಯಲ್ಲಿ ಗುಂಪುಗೂಡಬೇಡಿ. ನಾನು ನಾಲ್ಕರಿಂದ ಐದು ದಿನಗಳೊಳಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದೇನೆ. ಆ ಬಳಿಕ ಎಲ್ಲರನ್ನು ಭೇಟಿಯಾಗುತ್ತೇನೆ’ ಎಂದು ಶ್ರೀಪಾದ್‌ ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು