ಸೋಮವಾರ, ಏಪ್ರಿಲ್ 19, 2021
24 °C

200 ಸೀಟು ಗೆಲ್ಲದಿದ್ದರೆ, ಬಿಜೆಪಿ ನಾಯಕರು ಸ್ಥಾನ ಬಿಟ್ಟುಕೊಡಲಿ: ಪ್ರಶಾಂತ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿಯನ್ನೂ ದಾಟಲು ಸಾಧ್ಯವಿಲ್ಲ. ಒಂದು ವೇಳೆ ಚುನಾವಣೆಯಲ್ಲಿ 200 ಸ್ಥಾನಗಳನ್ನು ಪಡೆಯುವಲ್ಲಿ ಬಿಜೆಪಿ ವಿಫಲವಾದರೆ, ಪಕ್ಷದ ನಾಯಕರು ತಮ್ಮ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಿದ್ದಾರೆಯೇ ಎಂದು ಚುನಾವಣಾ ನೀತಿನಿರೂಪಕ ಪ್ರಶಾಂತ್ ಕಿಶೋರ್ ಅವರು ಸವಾಲು ಹಾಕಿದ್ದಾರೆ.

‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿಯನ್ನೂ ದಾಟುವುದು ಕಷ್ಟ, ಬಿಜೆಪಿ 100 ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯಲಿದೆ. ಒಂದು ವೇಳೆ ಅವರು ಎರಡಂಕಿಯನ್ನು ಮೀರಿ ಸ್ಥಾನಗಳನ್ನು ಗೆದ್ದರೆ, ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಅವರು ಹೇಳಿದ್ದಾರೆ.

2014ರಲ್ಲಿ ಪ್ರಧಾನಿ ಸ್ಥಾನಕ್ಕಾಗಿ ನರೇಂದ್ರ ಮೋದಿ ಪರ ಪ್ರಶಾಂತ್‌ ಕಿಶೋರ್‌ ಅವರು  ನಡೆಸಿದ್ದ ಅಭಿಯಾನವು ಯಶಸ್ವಿಯಾಗಿತ್ತು. ಆದರೆ ಇದೀಗ ಮುಂದಿನ ವರ್ಷ ಏಪ್ರಿಲ್‌–ಮೇ ತಿಂಗಳಿನಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪರ ಪ್ರಚಾರದಲ್ಲಿ ಪ್ರಶಾಂತ್‌ ಕಿಶೋರ್‌ ಅವರು ನಿರತರಾಗಿದ್ದಾರೆ.

ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಎರಡಂಕಿಯನ್ನೂ ದಾಟುವುದು ಕಷ್ಟ ಎಂದು ಸೋಮವಾರ ‍ಪ್ರಶಾಂತ್‌ ಕಿಶೋರ್‌ ಅವರು ಟ್ವೀಟ್‌ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗೀಯಾ ಅವರು, ‘ಪಶ್ಚಿಮ ಬಂಗಾಳದಲ್ಲಿ ಎದ್ದಿರುವ ಬಿಜೆಪಿ ಸುನಾಮಿಯನ್ನು ಗಮನಿಸಿದರೆ, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾದ ಬಳಿಕ ದೇಶವು ಒಬ್ಬ ಚುನಾವಣಾ ನೀತಿನಿರೂಪಕನನ್ನು ಕಳೆದುಕೊಳ್ಳಲಿದೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು