ಕೇರಳದಲ್ಲಿ ಅಧಿಕಾರಕ್ಕೆ ಬಂದರೆ 'ಲವ್ ಜಿಹಾದ್' ವಿರುದ್ಧ ಕಾನೂನು ಜಾರಿ: ಬಿಜೆಪಿ

ಪಾಲಕ್ಕಾಡ್: ಕೇರಳದಲ್ಲಿ ಅಧಿಕಾರಕ್ಕೆ ಬಂದರೆ 'ಲವ್ ಜಿಹಾದ್' ವಿರುದ್ಧ ಕಾನೂನು ಜಾರಿ ಮಾಡಲಾಗುವುದು ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಕೇರಳ ಘಟಕ ಅಧ್ಯಕ್ಷ ಕೆ. ಸುರೇಂದ್ರನ್ ಹೇಳಿಕೆ ನೀಡಿದ್ದಾರೆ.
ಕೇಂದ್ರ ಚುನಾವಣಾ ಆಯೋಗವು ಐದು ರಾಜ್ಯ/ಕೇಂದ್ರಡಾಳಿತ ಪ್ರದೇಶಗಳಿಗೆ ನಡೆಯಲಿರುವ ವಿಧಾನಸಭಾ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಕೇರಳದಲ್ಲಿ ಒಂದೇ ಹಂತದಲ್ಲಿ ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ.
ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್, ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನಿನ ಅಗತ್ಯವಿದೆ ಎಂದರು.
ಇದನ್ನೂ ಓದಿ: ABP ಸಿ–ವೋಟರ್ ಸಮೀಕ್ಷೆ: ಪುದುಚೇರಿ, ಅಸ್ಸಾಂನಲ್ಲಿ ಬಿಜೆಪಿ, ಬಂಗಾಳದಲ್ಲಿ ಹಣಾಹಣಿ
ಲವ್ ಜಿಹಾದ್ ಉತ್ತರ ಪ್ರದೇಶಕ್ಕಿಂತ ಕೇರಳದಲ್ಲಿ ವ್ಯಾಪಕವಾಗಿದೆ, ಅದನ್ನು ತಡೆಯಲು ಕಾನೂನಿನ ಅಗತ್ಯವಿದೆ. ರಾಜ್ಯದಲ್ಲಿ ಕ್ರೈಸ್ತ ಸಮುದಾಯವು ಆತಂಕಕ್ಕೊಳಗಾಗಿದ್ದು, ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮಕ್ಕೆ ಕೋರಿದೆ. ಇದು ಅವರಿಗೆ ತೀವ್ರ ಕಳಕಳಿಯ ಸಂಗತಿಯಾಗಿದೆ ಎಂದು ಹೇಳಿದರು.
ವಿವಾಹ ಹಾಗೂ ಮೋಸದ ಮೂಲಕ ಮತಾಂತರವನ್ನು ತಡೆಯಲು ಬಿಜೆಪಿ ಆಡಳಿತದ ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕಾನೂನನ್ನು ಜಾರಿಗೆ ತರಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.