ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ | ಅಗತ್ಯಬಿದ್ದರೆ ಶಾಲೆಗಳಲ್ಲಿ ಎಸ್‌ಒಪಿ ಪಾಲನೆ: ಕೇಜ್ರಿವಾಲ್

Last Updated 14 ಏಪ್ರಿಲ್ 2022, 11:42 IST
ಅಕ್ಷರ ಗಾತ್ರ

ನವದೆಹಲಿ: ‘ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್–19 ಪರಿಸ್ಥಿತಿಯ ಮೇಲೆ ನಮ್ಮ ಸರ್ಕಾರವು ನಿಗಾ ವಹಿಸಿದ್ದು, ಅಗತ್ಯಬಿದ್ದರೆ ಶಾಲೆಗಳಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮಗಳನ್ನು (ಎಸ್‌ಒಪಿ) ಅಳವಡಿಸಲಾಗುವುದು’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ತಿಳಿಸಿದ್ದಾರೆ.

‘ಕೊರೊನಾ ವೈರಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ’ ಎಂದೂ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ದೆಹಲಿಯಲ್ಲಿ 299 ಹೊಸ ಕೋವಿಡ್ ಪ್ರಕರಣಗಳು ವರದಿಯಾದ ಒಂದು ದಿನದ ಬಳಿಕ ಅರವಿಂದ ಕೇಜ್ರಿವಾಲ್ ಅವರು ಪ್ರತಿಕ್ರಿಯಿಸಿದ್ದು, ಅಗತ್ಯಬಿದ್ದರೆ ಶಾಲೆಗಳಲ್ಲಿ ಎಸ್‌ಒಪಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ನಗರ ಆರೋಗ್ಯ ಇಲಾಖೆಯು ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲಿ ಕೋವಿಡ್‌ನ ಪಾಸಿಟಿವಿಟಿ ಪ್ರಮಾಣವು ಶೇ 2.49ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT