ಶುಕ್ರವಾರ, ಮೇ 20, 2022
25 °C

ಹೊಗೇನಕಲ್‌ ಜಲಯೋಜನೆ: ಡಿಎಂಕೆ ನೇತೃತ್ವದ ಸರ್ಕಾರಕ್ಕೆ ಎಐಎಡಿಎಂಕೆ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಹೊಗೇನಕಲ್‌ ಜಲ ಯೋಜನೆಯ ಎರಡನೇ ಹಂತದ ಕಾಮಗಾರಿ ಕುರಿತಂತೆ ಡಿಎಂಕೆ ನೇತೃತ್ವದ ಸರ್ಕಾರವನ್ನು ಬೆಂಬಲಿಸಲಾಗುವುದು ಎಂದು ಎಐಎಡಿಎಂಕೆ ಭಾನುವಾರ ಹೇಳಿದೆ.

ಇದೇ ವೇಳೆ ಯೋಜನೆಗೆ ಆಕ್ಷೇಪ ಎತ್ತಿರುವ ಕರ್ನಾಟಕ ಸರ್ಕಾರದ ನಿಲುವನ್ನು ಖಂಡಿಸಿದೆ. ಧರ್ಮಪುರಿ ಮತ್ತು ಕೃಷ್ಣಗಿರಿ ಜಿಲ್ಲೆಗಳ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವುದು ಇದರ ಗುರಿ ಎಂದು ತಮಿಳುನಾಡು ಸರ್ಕಾರ ಹೇಳಿಕೊಂಡಿದೆ.

ಈ ಕುರಿತ ಹೇಳಿಕೆಯಲ್ಲಿ ಎಐಎಡಿಎಂಕೆ ಸಂಯೋಜಕ ಒ.ಪನ್ನೀರ್‌ಸೆಲ್ವಂ ಅವರು, ‘ಕರ್ನಾಟಕ ಸರ್ಕಾರ ಸಕಾಲದಲ್ಲಿ ಕಾವೇರಿ ನೀರು ಹರಿಸುತ್ತಿಲ್ಲ. ಕೇವಲ ಹೆಚ್ಚುವರಿ ನೀರಷ್ಟೇ ಹರಿದುಬರುತ್ತಿದೆ’ ಎಂದು ಆರೋಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು